Featured

ಶಾಲೆಯ ಶುಲ್ಕ ಕಟ್ಟಲು ಸಾಧ್ಯವಾಗದೆ ಮಗಳ ಜತೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾಯಿ – vishwanews24

ಶಾಲೆಯ ಶುಲ್ಕ ಕಟ್ಟಲು ಸಾಧ್ಯವಾಗದೆ ಮಗಳ ಜತೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾಯಿ

ಮಕ್ಕಳ ಶಾಲೆಯ ಶುಲ್ಕ ಕಟ್ಟಲು ಸಾಧ್ಯವಾಗಿಲ್ಲ ಎಂದು ಮಹಿಳೆಯೊಬ್ಬರು ಮಗಳ ಜತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 26 ವರ್ಷದ ಮಹಿಳೆ ಹಣದ ಕೊರತೆಯಿಂದಾಗಿ ಸಿಬಿಎಸ್​ಇ ಶಾಲೆಗೆ ಕಳುಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನೊಂದು ಐದು ವರ್ಷದ ಮಗಳ ಜತೆಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಎರಡು ದಿನಗಳ ಹಿಂದೆ ಮಧ್ಯ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ನಿಲಂಗಾ ತಹಸಿಲ್‌ನ ಮಾಲೆಗಾಂವ್‌ನಲ್ಲಿ ಈ ಘಟನೆ ನಡೆದಿದೆ. ಔರಾದ್ ಶಹಾಜಾನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರನ್ನು ಭಾಗ್ಯಶ್ರೀ ವೆಂಕಟ್ ಹಲ್ಸೆ (26) ಮತ್ತು ಸಮೀಕ್ಷಾ ವೆಂಕಟ್ ಹಲ್ಸೆ (5) ಎಂದು ಗುರುತಿಸಲಾಗಿದೆ. ಮಹಿಳೆಯ ಪತಿಯು ಒಂದೂವರೆ ಎಕರೆ ಜಮೀನನ್ನು ಹೊಂದಿದ್ದು, ಕುಟುಂಬದ ಜೀವನೋಪಾಯವು ಮುಖ್ಯವಾಗಿ ಮೇಕೆಗಳನ್ನು ಮೇಯಿಸುವುದನ್ನು ಅವಲಂಬಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಭಾಗ್ಯಶ್ರೀ ತನ್ನ ಮಗ ಮತ್ತು ಮಗಳನ್ನು ಸಿಬಿಎಸ್‌ಇ-ಸಂಯೋಜಿತ ಶಾಲೆಗೆ ಕಳುಹಿಸಲು ಬಯಸಿದ್ದಳು, ಅದು ತನ್ನ ಗಂಡನ ಸಾಮರ್ಥ್ಯಕ್ಕೆ ಮೀರಿದೆ. ಇದರಿಂದ ಆಕೆ ಆಗಾಗ್ಗ ಖಿನ್ನತೆಗೆ ಒಳಗಾಗುತ್ತಿದ್ದಳು ಎಂದು ಆಕೆಯ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.

ಪತಿ ವೆಂಕಟ್ ಹಲ್ಸೆಗೆ ವಿಡಿಯೋ ಕಾಲ್ ಮಾಡಿ ಮಗಳ ಮುಖವನ್ನು ಕೊನೆಯ ಬಾರಿ ನೋಡುವಂತೆ ಹೇಳಿ ಬಾಲಕಿಯೊಂದಿಗೆ ಬಾವಿಗೆ ಹಾರಿದ್ದಾಳೆ.

ಬಳಿಕ ಸ್ಥಳೀಯರ ನೆರವಿನಿಂದ ಪೊಲೀಸರು ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago