ಮಕ್ಕಳ ಶಾಲೆಯ ಶುಲ್ಕ ಕಟ್ಟಲು ಸಾಧ್ಯವಾಗಿಲ್ಲ ಎಂದು ಮಹಿಳೆಯೊಬ್ಬರು ಮಗಳ ಜತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. 26 ವರ್ಷದ ಮಹಿಳೆ ಹಣದ ಕೊರತೆಯಿಂದಾಗಿ ಸಿಬಿಎಸ್‌ಇ ಶಾಲೆಗೆ ಕಳುಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ನೊಂದು ಐದು ವರ್ಷದ ಮಗಳ ಜತೆಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಎರಡು ದಿನಗಳ ಹಿಂದೆ ಮಧ್ಯ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ನಿಲಂಗಾ ತಹಸಿಲ್‌ನ ಮಾಲೆಗಾಂವ್‌ನಲ್ಲಿ ಈ ಘಟನೆ ನಡೆದಿದೆ. ಔರಾದ್ ಶಹಾಜಾನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರನ್ನು ಭಾಗ್ಯಶ್ರೀ ವೆಂಕಟ್ ಹಲ್ಸೆ (26) ಮತ್ತು ಸಮೀಕ್ಷಾ ವೆಂಕಟ್ ಹಲ್ಸೆ (5) ಎಂದು ಗುರುತಿಸಲಾಗಿದೆ. ಮಹಿಳೆಯ ಪತಿಯು ಒಂದೂವರೆ ಎಕರೆ ಜಮೀನನ್ನು ಹೊಂದಿದ್ದು, ಕುಟುಂಬದ ಜೀವನೋಪಾಯವು ಮುಖ್ಯವಾಗಿ ಮೇಕೆಗಳನ್ನು ಮೇಯಿಸುವುದನ್ನು ಅವಲಂಬಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಭಾಗ್ಯಶ್ರೀ ತನ್ನ ಮಗ ಮತ್ತು ಮಗಳನ್ನು ಸಿಬಿಎಸ್‌ಇ-ಸಂಯೋಜಿತ ಶಾಲೆಗೆ ಕಳುಹಿಸಲು ಬಯಸಿದ್ದಳು, ಅದು ತನ್ನ ಗಂಡನ ಸಾಮರ್ಥ್ಯಕ್ಕೆ ಮೀರಿದೆ. ಇದರಿಂದ ಆಕೆ ಆಗಾಗ್ಗ ಖಿನ್ನತೆಗೆ ಒಳಗಾಗುತ್ತಿದ್ದಳು ಎಂದು ಆಕೆಯ ಕುಟುಂಬಸ್ಥರು ಪೊಲೀಸರಿಗೆ ತಿಳಿಸಿದ್ದಾರೆ.
ಪತಿ ವೆಂಕಟ್ ಹಲ್ಸೆಗೆ ವಿಡಿಯೋ ಕಾಲ್ ಮಾಡಿ ಮಗಳ ಮುಖವನ್ನು ಕೊನೆಯ ಬಾರಿ ನೋಡುವಂತೆ ಹೇಳಿ ಬಾಲಕಿಯೊಂದಿಗೆ ಬಾವಿಗೆ ಹಾರಿದ್ದಾಳೆ.
ಬಳಿಕ ಸ್ಥಳೀಯರ ನೆರವಿನಿಂದ ಪೊಲೀಸರು ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…