ಮುಂಬೈ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಸೈನಿಕರ ಜೊತೆಗೆ ಹಾಡಿ ಕುಣಿದು, ಶಾಲೆ ನಿರ್ಮಾಣಕ್ಕೆ ಒಂದು ಕೋಟಿ ರೂ. ದೇಣಿಗೆಯನ್ನು ನೀಡಿದ್ದಾರೆ.
ಅಕ್ಷಯ್ ಕುಮಾರ್ ಇತ್ತೀಚೆಗೆ ಜಮ್ಮು ಕಾಶ್ಮೀರ ಪ್ರದೇಶಕ್ಕೆ ಭೇಟಿ ನೀಡಿದ್ದರು. ಅಲ್ಲಿನ ಜನರೊಂದಿಗೆ ಕೆಲ ಕಾಲ ಬೆರೆತರು. ನಂತರ ಸೈನಿಕರ ಜೊತೆ ಸಂವಾದ ನಡೆಸಿದರು. ಅವರಿಗೆ ಉತ್ಸಾಹ ತುಂಬಲು ಹಾಡಿ, ಕುಣಿದರು. ಬಿಎಸ್‍ಎಫ್ ಸೈನಿಕರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡರು. ಬಾಲಿವುಡ್ ನಟನನ್ನು ನೋಡಲು ಸುತ್ತಮುತ್ತಲಿನ ಹಳ್ಳಿಯ ಜನರು ಮುಗಿಬಿದ್ದಿದ್ದರು. ಈ ವೇಳೆ ಅಲ್ಲಿನ ನೀರೂ ಗ್ರಾಮದಲ್ಲಿ ಶಾಲೆ ನಿರ್ಮಾಣಕ್ಕಾಗಿ 1 ಕೋಟಿ ರೂ. ದೇಣಿಗೆ ನೀಡುವ ಮೂಲಕವಾಗಿ ಅಕ್ಷಯ್ ಕುಮಾರ್ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಅಕ್ಷಯ್ ಕುಮಾರ್ ಬ್ಯುಸಿ ಆಗಿದ್ದಾರೆ. ರೋಹಿತ್ ಶೆಟ್ಟಿ ನಿರ್ದೇಶನದಲ್ಲಿ ಅವರು ನಟಿಸಿರುವ ಸೂರ್ಯವಂಶಿ ಚಿತ್ರದ ಬಿಡುಗಡೆಯು ಲಾಕ್‍ಡೌನ್ ಕಾರಣದಿಂದ ತಡವಾಗಿದೆ. ಬಹುನಿರೀಕ್ಷಿತ ಬೆಲ್ ಬಾಟಂ ಸಿನಿಮಾ ಜುಲೈ 27ರಂದು ಚಿತ್ರಮಂದಿರದಲ್ಲಿಯೇ ರಿಲೀಸ್ ಆಗಲಿದೆ ಎಂದು ಅವರು ಇತ್ತೀಚೆಗೆ ಸುದ್ದಿ ನೀಡಿದ್ದಾರೆ. ಇದಲ್ಲದೆ ಅತರಂಗಿರೇ, ಬಚ್ಚನ್ ಪಾಂಡೆ, ರಾಮ್ ಸೇತು ಮುಂತಾದ ಸಿನಿಮಾಗಳಲ್ಲಿ ಅಕ್ಷಯ್ ಕುಮಾರ್ ತೊಡಗಿಕೊಂಡಿದ್ದಾರೆ.
ಸಮಾಜಮುಖಿ ಕಾರ್ಯಗಳಲ್ಲಿ ಸದಾ ಮುಂದಿರುತ್ತಾರೆ. ಕಳೆದ ವರ್ಷ ಲಾಕ್‍ಡೌನ್ ಆರಂಭ ಆದಾಗ ಬರೋಬ್ಬರಿ 25 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡುವ ಮೂಲಕ ಅಕ್ಷಯ್ ಕುಮಾರ್ ಎಲ್ಲರಿಗೂ ಮಾದರಿ ಆಗಿದ್ದರು. ಈಗ ಶಾಲೆ ನಿರ್ಮಾಣಕ್ಕಾಗಿ ಒಂದು ಕೋಟಿ ರೂ. ದೇಣಿಗೆ ನೀಡಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…