ಬೆಂಗಳೂರು : 9 ರಿಂದ 12 ನೇ ತರಗತಿವರೆಗೆ ಪ್ರಾರಂಭ ಮಾಡುವ ಕುರಿತು ಇಂದು ಸಂಜೆ ಮಾರ್ಗಸೂಚಿ ಬಿಡುಗಡೆ ಮಾಡಲಿದ್ದು, ಮುಖ್ಯಮಂತ್ರಿಗಳು ಕೂಡ ಶಾಲೆ ಪ್ರಾರಂಭ ಘೋಷಿಸಿದ್ದಾರೆ. ಆಗಸ್ಟ್ 23 ರಿಂದ ಶಾಲೆಗಳು ಪ್ರಾರಂಭವಾಗುತ್ತವೆ ಆದರೆ ಒಂದೇ ಒಂದು ಸೋಂಕು ಕಂಡು ಬಂದರೂ ತರಗತಿ ನಿಲ್ಲಿಸುತ್ತೇವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ತರಗತಿ ಪ್ರಾರಂಭಕ್ಕೆ ಬೇಕಾದ ಎಲ್ಲಾ ಸಿದ್ದತೆ ಮಾಡಿಕೊಳುತ್ತಿದ್ದೇವೆ. ಎರಡು ಜಿಲ್ಲೆ ಹೊರತು ಪಡಿಸಿ ಉಳಿದ ಕಡೆ ಪ್ರಾರಂಭ ಮಾಡುತ್ತಿದ್ದೇವೆ. ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಮಕ್ಕಳಿಗೆ ಪೂರಕವಾದ ಮಾರ್ಗಸೂಚಿ ಪ್ರಕಟವಾಗಲಿದೆ” ಎಂದಿದ್ದಾರೆ.
ಇನ್ನು “ಮಕ್ಕಳಿಗೆ ಮಾಸ್ಕ್ ಕಡ್ಡಾಯವಾಗಿದ್ದು, ಮನೆಯಿಂದ ಬಂದು ಮನೆಗೆ ವಾಪಸಾಗುವವರೆಗೆ ಇರಬೇಕು. ಇದನ್ನು ಶಿಕ್ಷಕರು ನೋಡಿಕೊಳ್ಳುತ್ತಾರೆ. ಶಿಕ್ಷಕರಿಂದಲೂ ಶಾಲೆ ಪ್ರಾರಂಭಕ್ಕೆ ಬೆಂಬಲವಿದೆ” ಎಂದರು.
“ಕೊರೊನಾದ ಮೂರನೇ ಅಲೆ ಬರುತ್ತದೆ ಎಂಬ ತಜ್ಙರ ಸಲಹೆಗೆ ಹೆಚ್ಚಿನ ಒತ್ತು ಕೊಟ್ಟಿದ್ದೇವೆ. ಆಗಸ್ಟ್ 30 ರಂದು ತಜ್ಙರ ಸಮಿತಿ ಸಭೆ ನಡೆಯುತ್ತದೆ. ತಜ್ಙರ ಜೊತೆ ಸಿಎಂ ಸಭೆ ನಡೆಸುತ್ತಾರೆ” ಎಂದು ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…