ಬೆಂಗಳೂರು: ಭಯೋತ್ಪಾದಕರನ್ನು ಪೊಲೀಸರು ಹಿಡಿದು ತಂದರೆ, ಆಗಲೂ ಪೊಲೀಸ್ ಠಾಣೆಗೆ ನುಗ್ತಿರಾ? ಪೊಲೀಸರನ್ನು ಪ್ರಶ್ನೆ ಮಾಡುವಿರಾ? ಇದನ್ನೆಲ್ಲಾ ಒಪ್ಪಲು ಆಗುವುದಿಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.
ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಘಟನೆಗೆ ಸಂಬಂಧಿಸಿದಂತೆ ಹರೀಶ್ ಪೂಂಜಾರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ, ಶಾಸಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಪೊಲೀಸ್ ಠಾಣೆಗೆ ಏಕೆ ಹೋಗಿದ್ದು? ಶಾಸಕರಾದ ಮಾತ್ರಕ್ಕೆ ಠಾಣೆಗೆ ಹೋಗಿ ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸಬಹುದೇ? ಎಂದು ಪ್ರಶ್ನಿಸಿದೆ.
ನಾಳೆ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ನೋಡಲು ಕೋರ್ಟ್ ಬಂದು ನಮ್ಮ ಮುಂದೆ ಕುಳಿತರೆ ಹೇಗೆ? ಆಗ ಏನು ಮಾಡುವುದು? ಶಾಸಕರು ಇರೋದು ಶಾಸನ ರೂಪಿಸಲು. ಅದರಂತೆ ಶಾಸನ ರಚನೆ ಮಾಡುವುದಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು. ಹೊರತುಪಡಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವುದಲ್ಲ ಎಂದು ಪೀಠ ತಿಳಿಸಿದೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…