ಬೆಂಗಳೂರು: ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ ಮಾಡಲು ಹೇಳಿದ್ದೇನೆ ಎಂದು ಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಪಕ್ಷ ಮುಖ್ಯ, ಪಕ್ಷದಲ್ಲಿ ಶಿಸ್ತು ಮುಖ್ಯ ಎಂದರು. ವೀರೇಂದ್ರ ಪಾಟೀಲ್ ಕಾಲದಲ್ಲಿ ಬಂಗಾರಪ್ಪ, ಮಲ್ಲಿಕಾರ್ಜುನ ಖರ್ಗೆ, ಧರ್ಮಸಿಂಗ್ ಅವರಿಗೆ ಕೊಟ್ಟಿರಲಿಲ್ಲ. ನಾನು, ಪರಮೇಶ್ವರ್ ಕೂಡ ಸಚಿವ ಸ್ಥಾನ ಕೊಡದಿದ್ದಾಗ ಸುಮ್ಮನೆ ಇರಲಿಲ್ಲವಾ ಎಂದು ಪ್ರಶ್ನಸಿದ್ದಾರೆ.
ಇದನ್ನೂ ಓದಿ:
ತಾಳ್ಮೆಯಿಂದ ಇರಬೇಕು, ನಾನು ತಾಳ್ಮೆಯಿಂದ ಇರಲಿಲ್ಲವಾ? ಎಲ್ಲರೂ ತಾಳ್ಮೆಯಿಂದ ಇರಬೇಕು. ಶಾಸಕರು ರಾಜೀನಾಮೆ ಕೊಟ್ಟರೆ ಎರಡೇ ನಿಮಿಷದಲ್ಲಿ ಅಂಗೀಕಾರ ಮಾಡಲು ಹೇಳಿದ್ದೇನೆ ಎಂದು ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. ಇದೇ ವೇಳೆ ತಕ್ಷಣದಿಂದಲೇ ನಿಗಮ ಮಂಡಳಿಗಳ ನೇಮಕಾತಿ ರದ್ದು ಮಾಡಿ ಅವರು ಆದೇಶ ಹೊರಡಿಸಿದ್ದಾರೆ.
ಸಚಿವ ಸ್ಥಾನ ತಪ್ಪಿದ ಬೆನ್ನಲ್ಲೇ ಹಲವು ಶಾಸಕರು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಈ ಬಗ್ಗೆ ಬೆಂಬಲಿಗರ ಜೊತೆ ಚರ್ಚಿಸಿ ತೀರ್ಮಾನ ಮಾಡುವುದಾಗಿ ತಿಳಿಸಿದ್ದರು. ಇದೀಗ ಅಸಮಾಧಾನಿತ ಶಾಸಕರು ರಾಜೀನಾಮೆ ಕೊಟ್ಟರೆ ಅಂಗಿಕರಿಸುವಂತೆ ಸೂಚಿಸಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಇದನ್ನೂ ಓದಿ:
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…