ಬೆಂಗಳೂರು: 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಆ ಕ್ಷೇತ್ರದ ಮತದಾರರು ನೀಡಿರುವ ತೀರ್ಪನ್ನು ನಾನು ಗೌರವಿಸಿ ಒಪ್ಪಿಕೊಂಡಿದ್ದೇನೆ ಎಂದು ಹೇಳಿದ ಸಿದ್ದರಾಮಯ್ಯನವರು ತಮ್ಮ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಉಳಿವಿನ ದೃಷ್ಟಿಯಿಂದ ಪಕ್ಷಾಂತರಿಗಳಿಗೆ, ಕುದುರೆ ವ್ಯಾಪಾರಕ್ಕೆ ಒಳಗಾಗಿದ್ದವರಿಗೆ ಜನರು ಶಿಕ್ಷೆ ಕೊಡುತ್ತಾರೆ, ಅವರಿಗೆ ಪಾಠ ಕಲಿಸುತ್ತಾರೆ ಎಂದು ನಿರೀಕ್ಷೆ ಮಾಡಿದ್ದೆ. ಆದರೆ ನನ್ನ ನಿರೀಕ್ಷೆ ಹುಸಿಯಾಗಿದೆ ಎಂದು ನೋವಿನಿಂದ ಹೇಳಿದರು.
ನಾನು ಶಾಸಕಾಂಗ ಪಕ್ಷದ ನಾಯಕನಾಗಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು. ಹಾಗಾಗಿ ಪಕ್ಷದ ಹಿತದೃಷ್ಟಿಯಿಂದ ನನ್ನ ಶಾಸಕಾಂಗ ಪಕ್ಷದ ನಾಯಕತ್ವಕ್ಕೆ ರಾಜೀನಾಮನೆ ನೀಡಿದ್ದೇನೆ.
ರಾಜೀನಾಮೆಯ ಒಂದು ಪ್ರತಿಯನ್ನು ಎಐಸಿಸಿಗೆ, ಕೆಪಿಸಿಸಿಗೆ ಹಾಗೂ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿವೇಣುಗೋಪಾಲ್ ಅವರಿಗೆ ಈಗಾಗಲೇ ಸಲ್ಲಿಸಿದ್ದೇನೆ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…