ಶಾಸಕರಾದ ಶಿವರಾಮ್ ಹೆಬ್ಬಾರ್ ಹಾಗೂ ಎಸ್ಟಿ ಸೋಮಶೇಖರ್ಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ. ಇಬ್ಬರನ್ನೂ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಇವರು ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ, ಅವರನ್ನು ಉಚ್ಚಾಟನೆ ಮಾಡುವ ನಿರ್ಧಾರವನ್ನು ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ತೆಗೆದುಕೊಂಡಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರವನ್ನು ಶಿವರಾಮ್ ಹೆಬ್ಬಾರ್ ಪ್ರತಿನಿಧಿಸುತ್ತಿದ್ದಾರೆ. ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ್ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಈ ಮೊದಲು ಇಬ್ಬರೂ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದರು. ಈ ಹಿಂದೆ ಇಬ್ಬರೂ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವರಾಮ್ ಹೆಬ್ಬಾರ್ ಅವರು ಕಾರ್ಮಿಕ ಸಚಿವರಾದರೆ, ಸೋಮಶೇಖರ್ ಅವರು ಸಹಕಾರ ಸಚಿವರಾಗಿದ್ದರು.
2023ರಲ್ಲಿ ಇಬ್ಬರೂ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬಂದರು. ಆದರೆ, ಈಗ ಶಿವರಾಮ್ ಹೆಬ್ಬಾರ್ ಹಾಗೂ ಸೋಮಶೇಖರ್ ಕಾಂಗ್ರೆಸ್ ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಕ್ಕಾಗಿ ಇಬ್ಬರೂ ಉಚ್ಚಾಟನೆ ಮಾಡಿ ಹೈ ಕಮಾಂಡ್ ಆದೇಶ ಹೊರಡಿಸಿದೆ.
ಈ ಮೊದಲು ಪಕ್ಷ ವಿರೋಧಿ ಆರೋಪದ ಮೇಲೆ ಬಸಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಈಗ ಇವರನ್ನೂ ಕೂಡ ಉಚ್ಚಾಟನೆ ಮಾಡಿ, ಪಕ್ಷ ವಿರೋಧಿ ಚಟುವಟಿಕೆ ಮಾಡುವವರಿಗೆ ಬಿಜೆಪಿ ಹೈಕಮಾಂಡ್ ಖಡಕ್ ಸಂದೇಶ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…