Featured

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆಡಿಎಸ್‌ನ ಗುಬ್ಬಿ ಶ್ರೀನಿವಾಸ್‌  – Vishwanews24

ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ್ ಇಂದು ರಾಜೀನಾಮೆ

ತುಮಕೂರು: ಗುಬ್ಬಿ ಕ್ಷೇತ್ರದ ಜೆಡಿಎಸ್  ಉಚ್ಛಾಟಿತ ಶಾಸಕ ಎಸ್‌ಆರ್ ಶ್ರೀನಿವಾಸ್ ಇಂದು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರಾಜೀನಾಮೆ ಅಂಗೀಕಾರ ಆದ ಬಳಿಕ ಕಾಂಗ್ರೆಸ್ ಸೇರುತ್ತೇನೆ. ದೇವೇಗೌಡರು ನನ್ನನ್ನು ಮಗನಂತೆ ನೋಡಿಕೊಳ್ಳುತ್ತಿದ್ದರು. ದೇವೇಗೌಡರು (HD Devegowda), ಕುಮಾರಸ್ವಾಮಿ ನಾಯಕತ್ವದಲ್ಲಿ ಕೆಲಸ ಮಾಡಿದ್ದೇನೆ. ದೇವೇಗೌಡರು ಹೆಚ್ಚಿನ ಪ್ರೋತ್ಸಾಹ ಕೊಟ್ಟು ಮಗನಂತೆ ನೊಡಿಕೊಂಡರು. ಕುಮಾರಸ್ವಾಮಿ ಅವರು ಕೂಡ ಒಡಹುಟ್ಟಿದ ತಮ್ಮನ ಹಾಗೆ ನೊಡಿಕೊಂಡಿದ್ದಾರೆ. ಅದ್ಯಾವ ಸಂದರ್ಭಕ್ಕೊಸ್ಕರ ನನ್ನನ್ನು ಹೊರಹಾಕಿದ್ರೋ ಗೊತ್ತಿಲ್ಲ. ಆದರೂ ಇವತ್ತು ಭಾರವಾದ ಹೃದಯದಿಂದ, ನೋವಿನಿಂದ ಆ ಪಕ್ಷಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ ಎಂದು ಭಾವುಕರಾದರು.

2021ರ ಅಕ್ಟೋಬರ್‌ನಲ್ಲಿ ಕುಮಾರಸ್ವಾಮಿ ಬಂದು ಗುಬ್ಬಿಗೆ ಬೇರೆ ಅಭ್ಯರ್ಥಿ ಘೋಷಣೆ ಮಾಡಿದರು. ಅವತ್ತಿನಿಂದ ನನ್ನ ಮತ್ತು ಕುಮಾರಸ್ವಾಮಿ ಮಧ್ಯೆ ಅಂತರ ಜಾಸ್ತಿ ಆಯ್ತು. ಅವರು ನನ್ನ ಮೇಲೆ ಇಲ್ಲದ ಆರೋಪ ಮಾಡಿದರು. ದೇವೇಗೌಡರನ್ನು ಸೋಲಿಸಲು ನಾನು ಮುಖ್ಯ ಕಾರಣ ಅಂದರು. ಯಾವತ್ತೂ ನಾನೂ ಅಂತಹ ಪಕ್ಷ ದ್ರೋಹ ಮಾಡಿಲ್ಲ ಎಂದು ಹೇಳಿದರು.

ನಾನು ಮತ್ತು ಕುಮಾರಸ್ವಾಮಿ ನಡುವೆ ಭಾವನಾತ್ಮಕ ಸಂಬಂಧ ಇತ್ತು. ಅವರು ಯಾರ ಮಾತು ಕೇಳಿದ್ರೋ ಗೊತ್ತಿಲ್ಲ. ನಾನು ಪಕ್ಷ ಬಿಡಲ್ಲ ಅಂದರೂ ಅಧಿಕೃತವಾಗಿ ಅವರನೇ ಬೇರೆ ಅಭ್ಯರ್ಥಿ ಘೋಷಣೆ ಮಾಡಿದರು. ಅಡ್ಡ ಮತದಾನ ಮಾಡಿರುವ ಆರೋಪ ಮಾಡಿದರು. ಪಕ್ಷದಿಂದ ವಜಾಗೊಳಿಸಿದರು. ಇದುವರೆಗೂ ನನಗೆ ಸಹಕಾರ ಕೊಟ್ಟ ಜೆಡಿಎಸ್ ಪಕ್ಷದ ಎಲ್ಲಾ ಶಾಸಕರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು.

ನಾವು ಕುಟುಂಬದ ಸದಸ್ಯರಂತೆ ಕೆಲಸ ಮಾಡಿದ್ದೇವೆ. ಎಲ್ಲರೂ ನನ್ನ ಪಕ್ಷದಲ್ಲಿ ಉಳಿಸಿಕೊಳ್ಳಲು ಪ್ರಯತ್ನಪಟ್ಟರು. ಕುಮಾರಸ್ವಾಮಿ 20 ವರ್ಷ ತಮ್ಮನ ರೀತಿಯಲ್ಲಿ ನೋಡಿಕೊಂಡಿದ್ದಾರೆ. ರೇವಣ್ಣ ಅವರು ಅಭಿವೃದ್ಧಿ ಕೆಲಸಕ್ಕೆ ಸ್ಪಂದಿಸಿದ್ದಾರೆ. ನಾನು ಮಲಗಿದ್ದರೂ ಫೋನ್ ಮಾಡಿ ನಿನ್ನ ಕ್ಷೇತ್ರಕ್ಕೆ ಏನು ಬೇಕು ಎಂದು ಕೇಳಿ ಕೆಲಸ ಹಾಕಿಕೊಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

17 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

18 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

19 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

20 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

20 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

20 hours ago