ಶಿವಮೊಗ್ಗ: ತಾವು ಹಲವು ವರ್ಷಗಳಿಂದ ಸ್ಪರ್ಧಿಸುತ್ತಿದ್ದ ಶಿಕಾರಿಪುರ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪುತ್ರ ಬಿ.ವೈ. ವಿಜಯೇಂದ್ರರಿಗಾಗಿ ಬಿಟ್ಟುಕೊಡುತ್ತಿದ್ದಾರೆ. ಇದನ್ನು ಖುದ್ದು ಯಡಿಯೂರಪ್ಪ ಅವರೇ ಇಂದು ಘೋಷಿಸಿದ್ದಾರೆ.
ಪುತ್ರನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಯಡಿಯೂರಪ್ಪ ಅವರು ಈ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ಅಂಜನಾಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಶಿಕಾರಿಪುರ ಕ್ಷೇತ್ರವನ್ನು ನಾನು ಬಿಟ್ಟುಕೊಡುತ್ತಿದ್ದೇನೆ. ಇಲ್ಲಿ ನನ್ನ ಬದಲಾಗಿ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ. ಮೈಸೂರು ಭಾಗದಿಂದ ಸ್ಪರ್ಧಿಸಲು ವಿಜಯೇಂದ್ರಗೆ ಒತ್ತಡವಿದೆ. ಆದರೆ ಶಿಕಾರಿಪುರದಲ್ಲಿ ಸ್ಥಾನ ತೆರವಾಗುವುದರಿಂದ ಅವರು ಶಿಕಾರಿಪುರದಲ್ಲೇ ಸ್ಪರ್ಧಿಸಲಿದ್ದಾರೆ ಎಂದರು.
ಶಿಕಾರಿಪುರದ ಜನರು ನನಗಿಂತಲೂ ದೊಡ್ಡ ಮತಗಳ ಅಂತರದಿಂದ ವಿಜಯೇಂದ್ರರನ್ನು ಗೆಲ್ಲಿಸಬೇಕು ಎಂದು ಇದೇ ವೇಳೆ ಬಿಎಸ್‌ವೈ ಮನವಿ ಮಾಡಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…