ಉಡುಪಿ : ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು (ರಿ), ಕೇಂದ್ರ ಸಮಿತಿ ಹುಬ್ಬಳ್ಳಿ ಮತ್ತು ಶ್ರೀ ಜನಾರ್ದನ ಮಹಾಂಕಾಳಿ ದೇವಸ್ಥಾನ ಸಮಿತಿ, ಅಂಬಲಪಾಡಿ ಇವರ ಸಂಯುಕ್ತ ಶ್ರಯದಲ್ಲಿ ಸೆಪ್ಟಂಬರ್ 5 ಮಂಗಳವಾರದಂದು ಅಂಬಲಪಾಡಿಯಲ್ಲಿ ನಡೆದ ಶಿಕ್ಷಕ ಸಾಹಿತಿಗಳ ಆರನೇಯ ಸಮ್ಮೇಳನ ಸಂಭ್ರಮ ಕಾರ್ಯಕ್ರಮದಲ್ಲಿ ಇತರ ರಾಜ್ಯಮಟ್ಟದ ಸಾಧಕರುಗಳೊಂದಿಗೆ ಮನೋಜ್ ಕಡಬ ಅವರು *ರಾಜ್ಯಮಟ್ಟದ ಅಮೃತ ಸಮ್ಮಾನ ಗೌರವ ಪ್ರಶಸ್ತಿ* ಯನ್ನು ಸ್ವೀಕರಿಸಿದರು.
ಉಡುಪಿಯ ಶೆಫಿನ್ಸ್ ಇಂಗ್ಲಿಷ್ ಅಕಾಡೆಮಿಯ ನಿರ್ದೇಶಕ ಮತ್ತು ಸ್ಪೋಕನ್ದ ಇಂಗ್ಲಿಷ್ ತರಬೇತುದಾರರಾದ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನ ವನ್ನು ಆರಂಭಿಸಿ, ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವ ಕಾರ್ಯಕ್ಕಾಗಿ ಇವರನ್ನು ಸನ್ಮಾನಿಸಲಾಯಿತು. ಸಮ್ಮೇಳನದ ಸರ್ವಾಧ್ಯಕ್ಷರಾದ ನೆಂಪು ನರಸಿಂಹ ಭಟ್ಟ, ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ, ಹಿರಿಯ ಪತ್ರಕರ್ತ ಡಾ.ಶೇಖರ ಅಜೆಕಾರು, ಹಿರಿಯ ಶಿಕ್ಷಕಿ ಶಾಂತಾ ಚಂದ್ರಶೇಖರ ಪುತ್ತೂರು ಮತ್ತಿತರರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…