Featured

ಶಿಕ್ಷಕರ ದಿನಾಚರಣೆ: ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನದ ಮನೋಜ್ ಕಡಬ ಅವರಿಗೆ ಉಡುಪಿಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ – vishwanews24

ಶಿಕ್ಷಕರ ದಿನಾಚರಣೆ: ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನದ ಮನೋಜ್ ಕಡಬ ಅವರಿಗೆ ಉಡುಪಿಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ

ಉಡುಪಿ : ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು (ರಿ), ಕೇಂದ್ರ ಸಮಿತಿ ಹುಬ್ಬಳ್ಳಿ ಮತ್ತು ಶ್ರೀ ಜನಾರ್ದನ ಮಹಾಂಕಾಳಿ ದೇವಸ್ಥಾನ ಸಮಿತಿ, ಅಂಬಲಪಾಡಿ ಇವರ ಸಂಯುಕ್ತ ಶ್ರಯದಲ್ಲಿ ಸೆಪ್ಟಂಬರ್ 5 ಮಂಗಳವಾರದಂದು ಅಂಬಲಪಾಡಿಯಲ್ಲಿ ನಡೆಯಲಿರುವ ಶಿಕ್ಷಕ ಸಾಹಿತಿಗಳ ಆರನೇಯ ಸಮ್ಮೇಳನ ಸಂಭ್ರಮ ಕಾರ್ಯಕ್ರಮದಲ್ಲಿ ಉಡುಪಿಯ ಶೆಫಿನ್ಸ್ ಇಂಗ್ಲಿಷ್ ಅಕಾಡೆಮಿಯ ನಿರ್ದೇಶಕ ಮತ್ತು ಸ್ಪೋಕನ್ ಇಂಗ್ಲಿಷ್ ತರಬೇತುದಾರ ಶ್ರೀ ಮನೋಜ್ ಕಡಬ ಇವರು ಸ್ಪೋಕನ್ ಇಂಗ್ಲಿಷ್ ಕಲಿಸುವ ಮೂಲಕ ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನ ವನ್ನು ಆರಂಭಿಸಿ, ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವ ಬಹುದೊಡ್ಡ ಕೆಲಸವನ್ನು ಮಾಡುತ್ತಿರುವ ಕಾರ್ಯಕ್ಕಾಗಿ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಸನ್ಮಾನಿಸಲಾಗುತ್ತಿದೆ.

“ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸರಕಾರಿ ಮತ್ತು ಅನುದಾನಿತ ಶಾಲೆಗಳ ಅತಿಥಿ ಹಾಗೂ ಗೌರವ ಶಿಕ್ಷಕಿಯರಿಗೆ ಹಾಗೂ ಮಕ್ಕಳಿಗೆ ವರ್ಷ ಪೂರ್ತಿ ಉಚಿತ ಸ್ಪೋಕನ್ ಇಂಗ್ಲಿಷ್ ತರಬೇತಿ ನೀಡುವ ಮೂಲಕ ಅವರೆಲ್ಲರ ಬಾಳಿಗೆ ದೀಪವಾಗುವ ಹಾಗೂ ಅಲ್ಲಿನ ಮಕ್ಕಳು ಇಂಗ್ಲಿಷ್ ನಲ್ಲಿ ಮಾತನಾಡುವುದನ್ನು ಕಾಣುವ ನೆರೆಮನೆಯ ಮಕ್ಕಳೂ ಕನ್ನಡ ಮಾಧ್ಯಮ ಶಾಲೆಗಳತ್ತ ಆಕರ್ಷಿತರಾಗಿ, ಶಾಲೆಗಳ ಮಕ್ಕಳ ಸಂಖ್ಯೆಯಲ್ಲಿ ಹೆಚ್ಚಳವಾಗಬಹುದೆಂಬ ನಿರೀಕ್ಷೆಯಲ್ಲಿ ಈ ಆಂದೋಲನವನ್ನು ಮಾಡುತ್ತಿದ್ದು, ಇಂತಹ ಕಾರ್ಯಕ್ಕಾಗಿ ನನ್ನನ್ನು ಶಿಕ್ಷಕರ ದಿನಾಚರೆಣೆಯಂದು ಸನ್ಮಾನಿಸುತ್ತಿರುವುದು ಸಂತಸ ತಂದಿದೆ. ಶಿಕ್ಷಣ ಇಲಾಖೆ ಉಪನಿರ್ದೇಶಕುಗಳ ಮತ್ತು ಶಿಕ್ಷಣಾಧಿಕಾರಿಗಳ ಅನುಮತಿಯೊಂದಿಗೆ ಮಾಡುತ್ತಿರುವ ಈ ಆಂದೋಲನಕ್ಕೆ ಆದರೆ ಶಾಲೆಗಳ ಶಿಕ್ಷಕರ, ಶಾಲಾಭಿವೃದ್ಧಿ ಮಂಡಳಿಯ, ಹಳೆ ವಿದ್ಯಾರ್ಥಿಗಳ ಮತ್ತು ಸಂಘ-ಸಂಸ್ಥೆಗಳ ಸಹಕಾರವಿದ್ದಲ್ಲಿ ಮಾತ್ರ ಈ ಕೆಲಸ ಸಾಧ್ಯ” ಎನ್ನುತ್ತಾರೆ ಮನೋಜ್ ಕಡಬ.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

10 minutes ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

41 minutes ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

53 minutes ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

3 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

4 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

17 hours ago