Featured

ಶಿಕ್ಷಕರ ಹಾಗೂ ಸರಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಅವರ ಧ್ವನಿಯಾಗುತ್ತೇನೆ : ರಘುಪತಿ ಭಟ್ -vishwanews24

ಪದವೀಧರರ ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಹಾಗೂ ಕ್ರಿಯಾಶೀಲವಾಗಿ ಕೆಲಸ ಮಾಡುತ್ತೇನೆ..

ಪದವೀಧರರಿಗೆ ಉದ್ಯೋಗ – ಪದವೀಧರರಿಂದ ಉದ್ಯಮ – ಸಹಾಯ – ಸಹಕಾರ – ಸಂಪರ್ಕ ಇದು ನನ್ನ ಆಶಯ..

ವಿಧಾನ ಪರಿಷತ್ ನ ಒಳಗೆ ಮತ್ತು ಹೊರಗೆ ನಿಮ್ಮ ಧ್ವನಿಯಾಗುತ್ತೇನೆ..: ರಘುಪತಿ ಭಟ್

ಶಿವಮೊಗ್ಗ: ಜನತೆಯ ಆಶೀರ್ವಾದದಿಂದ ಉಡುಪಿ ವಿಧಾನ ಸಭಾ ಕ್ಷೇತ್ರದಲ್ಲಿ 3 ಬಾರಿ ಶಾಸಕನಾದ ಉಡುಪಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿರುತ್ತೇನೆ. ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ನನ್ನನ್ನು ಹರಸಿ ಆಶೀರ್ವದಿಸಿದರೆ ವಿಧಾನ ಸಭೆ ಸದಸ್ಯನಾಗಿ ಕೆಲಸ ನಿರ್ವಹಿಸಿದ ಕಾರ್ಯಾನುಭವದೊಂದಿಗೆ ಪ್ರಾಮಾಣಿಕವಾಗಿ ಹಾಗೂ ಕ್ರಿಯಾಶೀಲವಾಗಿ ಕೆಲಸ ಮಾಡಿ ಪದವೀಧರರ, ಶಿಕ್ಷಕರ ಹಾಗೂ ಸರಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸಲು ಅವರ ಧ್ವನಿಯಾಗುತ್ತೇನೆ ಎಂದು ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಕೆ. ರಘುಪತಿ ಭಟ್ ಅವರು‌ ಹೇಳಿದರು.

ಶಿವಮೊಗ್ಗ ಹಾಗೂ ಶಿಕಾರಿಪುರದ ವಿವಿಧ ಭಾಗಗಳಲ್ಲಿ ಬುಧವಾರ ಮತದಾರರ ಸಭೆ ನಡೆಸಿ ಭರವಸೆ ನೀಡಿದರು.

ಪದವೀಧರರಿಗೆ ಉದ್ಯೋಗ – ಪದವೀಧರರಿಂದ ಉದ್ಯಮ – ಸಹಾಯ – ಸಹಕಾರ – ಸಂಪರ್ಕ ಇದು ನನ್ನ ಆಶಯವಾಗಿದೆ. ಎಲ್ಲಾ ಸರ್ಕಾರಿ ನೌಕರರ ಬೇಡಿಕೆಯಾದ ಎನ್.ಪಿ.ಎಸ್. (ನೂತನ ಪಿಂಚಣಿ ಯೋಜನೆ) ರದ್ದು ಪಡಿಸಿ ಒ.ಪಿ.ಎಸ್. (ಹಳೆ ಪಿಂಚಣಿ ಯೋಜನೆ) ಜಾರಿಗೆ ತರಲು ವಿಧಾನ ಪರಿಷತ್ ನ ಒಳಗೆ ಮತ್ತು ಹೊರಗೆ ನಿಮ್ಮ ಧ್ವನಿಯಾಗುತ್ತೇನೆ. ಹಾಗೂ ಶಿಕ್ಷಕರ ಸಮಸ್ಯೆಗಳು ಮತ್ತು ಬೇಡಿಕೆಗಳ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದು ಇದನ್ನು ಈಡೇರಿಸಲು ನಿಮ್ಮ ಧ್ವನಿಯಾಗುತ್ತೇನೆ ಎಂದ ಅವರು ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಮೊದಲ ಪ್ರಾಶಸ್ತ್ಯದ ಮತ ನೀಡಿ ಹರಿಸುವಂತೆ ಮನವಿ ಮಾಡಿದರು.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

8 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago