Featured

ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು ಸಿದ್ದರಾಮಯ್ಯ ಮನವಿ -Vishwanews24

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟ್ವಿಟ್ಟರ್ ಮೂಲಕ ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

ಮಾಜಿ ತ್ರಿಭಾಷಾ ಸೂತ್ರದಡಿಯಲ್ಲಿ ಎಲ್ಲಾ ರಾಜ್ಯಗಳಲ್ಲಿ ಮಾತೃಭಾಷೆ, ಆಂಗ್ಲ ಭಾಷೆ ಜೊತೆಗೆ ಮೂರನೇ ಭಾಷೆಯಾಗಿ ಹಿಂದಿ ಅಳವಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಗೆ ತ್ರಿಭಾಷಾ ಸೂತ್ರ ಅಳವಡಿಸಲು ಕೇಂದ್ರ ಸರ್ಕಾರ ಮುಂದಾಗಿರುವುದಕ್ಕೆ ದೇಶದ ಬಹುತೇಕ ಭಾಗಗಳಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಅದರಲ್ಲೂ ಮುಖ್ಯವಾಗಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ.

ಕರ್ನಾಟಕದಲ್ಲೂ ಕೂಡಾ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತವಾಗುತ್ತಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಶಿಕ್ಷಣದಲ್ಲಿ ಮಾತೃಭಾಷೆಯಲ್ಲದ ಭಾಷೆ ಐಚ್ಛಿಕವಾಗಿರಬೇಕೆಯೇ ಹೊರತು ಕಡ್ಡಾಯವಾಗಬಾರದು. ಇದು ಇನ್ನೊಂದು ಭಾಷೆಯ ಒತ್ತಾಯಪೂರ್ವಕ ಹೇರಿಕೆಯಂತಾಗಿ ಮಗುವಿನ ಕಲಿಕೆಯ ಶಕ್ತಿಯನ್ನು ಕುಂಠಿತಗೊಳಿಸುತ್ತದೆ.
ಹಿಂದಿ ಭಾಷಿಗರಲ್ಲದವರ ಮೇಲೆ ಹಿಂದಿ ಹೇರಿಕೆ ಮಾಡಲು ಹೊರಟಿರುವುದು ಭಾರತದ ಒಕ್ಕೂಟ ವ್ಯವಸ್ಥೆಗೆ ಮಾರಕವಾಗಿದೆ ಎಂಬುದು ನನ್ನ ಭಾವನೆ ಎಂದಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago