ಬೆಂಗಳೂರು : ಶಾಲೆಗಳಲ್ಲಿ ಇಷ್ಟು ದಿನ 1 ನೇ ತರಗತಿಯಿಂದ 8 ನೇ ತರಗತಿಯವರೆಗೆ ಶಾಲಾ ವಿದ್ಯಾರ್ಥಿಗಳ ಕಡ್ಡಾಯ ಉತ್ತೀರ್ಣ ನಿಯಮಕ್ಕೆ ಬ್ರೇಕ್ ಹಾಕಿದ್ದು, ಕೇಂದ್ರ ಸರ್ಕಾರ ಕಾನೂನು ತಿದ್ದುಪಡಿ ಮಾಡಿದೆ.
1 ನೇ ತರಗತಿಯಿಂದ 8 ನೇ ತರಗತಿಯವರೆಗೆ ಓದದ ಮಕ್ಕಳನ್ನು ಪಾಸ್ ಮಾಡುವಂತೆ ಇದ್ದ ಶಿಕ್ಷಣ ಹಕ್ಕು ಕಾಯ್ದೆಗೆ ಕೇಂದ್ರ ಸರ್ಕಾರ ಹೊಸ ತಿದ್ದುಪಡಿ ತಂದಿದ್ದು, ಈ ಮೂಲಕ ಓದದ ಮಕ್ಕಳನ್ನು ಇನ್ಮುಂದೆ ಫೇಲ್ ಮಾಡಬಹುದಾಗಿದೆ. 2009 ರಲ್ಲಿ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಶಿಕ್ಷಣ ಹಕ್ಕು ಕಾಯ್ದೆ ಮೊನ್ನೆಯಷ್ಟೇ ಕೇಂದ್ರ ಸರ್ಕಾರ ತಿದ್ದುಪಡಿಗೆ ತಂದಿತ್ತು. ಈ ಹೊಸ ತಿದ್ದುಪಡಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಕೇಂದ್ರ ಸರ್ಕಾರ ಅಧಿಕೃತ ರಾಜ್ಯ ಪತ್ರ ಹೊರಡಿಸಿದೆ.
2009ರಲ್ಲಿ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಶಿಕ್ಷಣ ಹಕ್ಕು ಕಾಯ್ದೆ ಮೊನ್ನೆಯಷ್ಟೇ ಕೇಂದ್ರ ಸರ್ಕಾರ ತಿದ್ದುಪಡಿಗೆ ತಂದಿತ್ತು. ಈ ಹೊಸ ತಿದ್ದುಪಡಿ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಇನ್ಮುಂದೆ ಪ್ರತಿ ವಿದ್ಯಾರ್ಥಿಗಳು ಪಾಸ್ ಆದರೆ ಮಾತ್ರ ಮುಂದಿನ ತರಗತಿಯಲ್ಲಿ ವ್ಯಾಸಂಗ ಮಾಡಬಹುದಾಗಿದೆ.
ವಿದ್ಯಾರ್ಥಿ ಮರು ಪರೀಕ್ಷೆಯಲ್ಲೂ ಫೇಲ್ ಆದರೆ ಇನ್ನೊಂದು ವರ್ಷ ಹಿಂದಿನ ತರಗತಿಯಲ್ಲೇ ವ್ಯಾಸಂಗ ಮುಂದುವರಿಸಬೇಕಾಗುತ್ತದೆ. 2009ರಿಂದ ಕಾಯ್ದೆ ಜಾರಿಗೆ ಬಂದಾಗಿನಿಂದ ದೇಶದಲ್ಲಿ ಶೈಕ್ಷಣಿಕ ಮೌಲ್ಯದ ಮಟ್ಟ ಕುಸಿಯುತ್ತಿತ್ತು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಮಹತ್ವದ ತಿದ್ದುಪಡಿಯನ್ನು ಜಾರಿಗೆ ತಂದಿದೆ ಎನ್ನಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…