ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ : ವಿದ್ಯಾರ್ಥಿಯ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ಗರಂ- vishwanews24

Featured, ರಾಜ್ಯ ನ್ಯೂಸ್

ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ : ವಿದ್ಯಾರ್ಥಿಯ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ಗರಂ  

ವಿದ್ಯಾರ್ಥಿ ಮೇಲೆ ಕ್ರಮ ಕೈಗೊಳ್ಳುವಂತೆ ಸಚಿವರ ಆದೇಶ

ಬೆಂಗಳೂರು: ವಿದ್ಯಾರ್ಥಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್‌ ವೇಳೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಭಾರೀ ಮುಜುಗರವಾಗಿದೆ.

ವಿಧಾನಸೌಧದಲ್ಲಿ ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ NEET, JEE, CET ಉಚಿತ ಕೋಚಿಂಗ್ ತರಬೇತಿಗೆ ಚಾಲನೆ ನೀಡುವ ಕಾರ್ಯಕ್ರಮ ಆಯೋಜನೆಗೊಂಡಿತ್ತು.

ಈ ವೇಳೆ ವಿದ್ಯಾರ್ಥಿಗಳ  ಜೊತೆ ಮಧು ಬಂಗಾರಪ್ಪ ವಿಡಿಯೋ ಕಾನ್ಫರೆನ್ಸ್‌  ಮೂಲಕ ಸಂವಾದ ನಡೆಸುತ್ತಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಚಿವರಿಗೆ ಕನ್ನಡ  ಬರಲ್ಲ ಎಂದು ನೇರವಾಗಿಯೇ ಹೇಳಿದ್ದಾನೆ.

ಯಾರೂ ಆತಂಕಪಡಬೇಡಿ , ಬಡವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಮತ್ತೆ ನೀಡುತ್ತೇವೆ : ಡಿಸಿಎಂ ಅಭಯ – vishwanews24

ಈ ಮಾತನ್ನು ಕೇಳಿಸಿಕೊಂಡ ಮಧು ಬಂಗಾರಪ್ಪ, ಯಾರೋ ಅದು ಹೇಳಿದ್ದು, ಏನಂತ ಹೇಳಿದ್ದು? ನಾನೇನು ಉರ್ದು ಮಾತಾಡಿದ್ನಾ? ಕನ್ನಡದಲ್ಲೇ ಮಾತನಾಡಿದ್ದು ಎಂದು ಗರಂ ಆದರು. ನಂತರ ಪಕ್ಕದಲ್ಲಿ ಕುಳಿತಿದ್ದ ಪದವಿ ಪೂರ್ವ ಕಾಲೇಜು ನಿರ್ದೇಶಕಿ ಸಿಂಧೂ ಬಿ ರೂಪೇಶ್ ಮತ್ತು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಅವರಲ್ಲಿ, ಯಾರು ನೋಡಿ ರೆಕಾರ್ಡ್ ಮಾಡಿ. ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.

ಮಾಧ್ಯಮಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳ ಸಮ್ಮುಖದಲ್ಲೇ ವಿದ್ಯಾರ್ಥಿ ನೇರವಾಗಿ ಹೇಳಿದ್ದರಿಂದ ತಕ್ಷಣವೇ ಗಲಿಬಿಲಿಗೊಂಡ ಮಧು ಬಂಗಾರಪ್ಪ, ಹೇ ಯಾರೋ ಅವನು ಹಾಗೆ ಮಾತನಾಡೋದು? ಯಾರು ಹಾಗೇ ಅಂದವರು ಡೀಟೇಲ್ಸ್ ತೆಗೆದುಕೊಳ್ಳಿ ಎಂದು ಗರಂ ಆಗಿ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು.

ಅಂಬೇಡ್ಕರ್ ಸಂವಿಧಾನ ಇರುವವರೆಗೂ ಹಿಂದೂ ರಾಷ್ಟ್ರ ನಿರ್ಮಾಣ ಅಸಾಧ್ಯ : ಯತೀಂದ್ರ ಸಿದ್ದರಾಮಯ್ಯ – vishwanews24

 

Leave a Reply