ಬೆಂಗಳೂರು: ವಿದ್ಯಾರ್ಥಿಗಳ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ವೇಳೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಭಾರೀ ಮುಜುಗರವಾಗಿದೆ.
ವಿಧಾನಸೌಧದಲ್ಲಿ ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ NEET, JEE, CET ಉಚಿತ ಕೋಚಿಂಗ್ ತರಬೇತಿಗೆ ಚಾಲನೆ ನೀಡುವ ಕಾರ್ಯಕ್ರಮ ಆಯೋಜನೆಗೊಂಡಿತ್ತು.
ಈ ವೇಳೆ ವಿದ್ಯಾರ್ಥಿಗಳ ಜೊತೆ ಮಧು ಬಂಗಾರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸುತ್ತಿದ್ದರು. ಈ ವೇಳೆ ವಿದ್ಯಾರ್ಥಿಯೊಬ್ಬ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದು ನೇರವಾಗಿಯೇ ಹೇಳಿದ್ದಾನೆ.
ಈ ಮಾತನ್ನು ಕೇಳಿಸಿಕೊಂಡ ಮಧು ಬಂಗಾರಪ್ಪ, ಯಾರೋ ಅದು ಹೇಳಿದ್ದು, ಏನಂತ ಹೇಳಿದ್ದು? ನಾನೇನು ಉರ್ದು ಮಾತಾಡಿದ್ನಾ? ಕನ್ನಡದಲ್ಲೇ ಮಾತನಾಡಿದ್ದು ಎಂದು ಗರಂ ಆದರು. ನಂತರ ಪಕ್ಕದಲ್ಲಿ ಕುಳಿತಿದ್ದ ಪದವಿ ಪೂರ್ವ ಕಾಲೇಜು ನಿರ್ದೇಶಕಿ ಸಿಂಧೂ ಬಿ ರೂಪೇಶ್ ಮತ್ತು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಅವರಲ್ಲಿ, ಯಾರು ನೋಡಿ ರೆಕಾರ್ಡ್ ಮಾಡಿ. ಅವರ ಮೇಲೆ ಕ್ರಮ ಕೈಗೊಳ್ಳಿ ಎಂದು ಸೂಚಿಸಿದರು.
ಮಾಧ್ಯಮಗಳು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳ ಸಮ್ಮುಖದಲ್ಲೇ ವಿದ್ಯಾರ್ಥಿ ನೇರವಾಗಿ ಹೇಳಿದ್ದರಿಂದ ತಕ್ಷಣವೇ ಗಲಿಬಿಲಿಗೊಂಡ ಮಧು ಬಂಗಾರಪ್ಪ, ಹೇ ಯಾರೋ ಅವನು ಹಾಗೆ ಮಾತನಾಡೋದು? ಯಾರು ಹಾಗೇ ಅಂದವರು ಡೀಟೇಲ್ಸ್ ತೆಗೆದುಕೊಳ್ಳಿ ಎಂದು ಗರಂ ಆಗಿ ಕಠಿಣ ಕ್ರಮ ಕೈಗೊಳ್ಳುವಂತೆ ಆದೇಶಿಸಿದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…