Featured

ಶಿಮ್ಲಾ: ಕಂದಕಕ್ಕೆ ಉರುಳಿ ಬಿದ್ದ ಬೊಲೆರೊ ; ಏಳು ಮಂದಿ ಸಾವು – vishwanews24

ಶಿಮ್ಲಾ: ಕಂದಕಕ್ಕೆ ಉರುಳಿ ಬಿದ್ದ ಬೊಲೆರೊ ; ಏಳು ಮಂದಿ ಸಾವು

ಶಿಮ್ಲಾ: ಶಿಮ್ಲಾದ ಮಸ್ರುಂದ್-ಹಮಲ್ ರಸ್ತೆಯಲ್ಲಿ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಏಳು ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.

ಬುಧವಾರ ಮಧ್ಯರಾತ್ರಿ 2 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ವಾಹನದ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಈ ಅಪಘಾತ ಸಂಭವಿಸಿದೆ. ಮೃತಪಟ್ಟವರೆಲ್ಲರೂ ಕುತೇಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಲ್ ಗ್ರಾಮದ ನಿವಾಸಿಗಳಾಗಿದ್ದಾರೆ. ಇವರೆಲ್ಲರೂ ಕಾಕ್ರೋಧಾ ಗ್ರಾಮದಲ್ಲಿ ನಡೆದ ಸಮಾರಂಭ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದಾಗ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ.

ಅಪಘಾತದ ತೀವ್ರತೆಗೆ ಬೊಲೆರೊ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಮೂವರು ಮಹಿಳೆಯರು ಮತ್ತು ಮೂವರು ಪುರುಷರು ಸೇರಿ ಒಟ್ಟು ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು, ಜಿಲ್ಲಾಡಳಿತ ಅಧಿಕಾರಿಗಳು ಮತ್ತು ಸ್ಥಳೀಯ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದರು. ಆದರೆ, ದಟ್ಟ ಕತ್ತಲೆ ಮತ್ತು ಕಡಿದಾದ ಗುಡ್ಡಗಾಡು ಪ್ರದೇಶವಾಗಿದ್ದರಿಂದ ಕಂದಕಕ್ಕೆ ಇಳಿದು ಮೃತದೇಹಗಳನ್ನು ಹೊರತೆಗೆಯಲು ರಕ್ಷಣಾ ತಂಡಗಳು ಹರಸಾಹಸ ಪಡಬೇಕಿತ್ತು.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

 

Vishwa News 24

Recent Posts

ಸುರತ್ಕಲ್: ಮುಕ್ಕ ಆಸ್ಪತ್ರೆಯ ಕ್ಯಾಂಟೀನ್, ಹಾಸ್ಟೆಲ್ ಅಡುಗೆ ಕೋಣೆಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ಭೇಟಿ ; ಪರಿಶೀಲನೆ – vishwanews24

ಸುರತ್ಕಲ್: ಮುಕ್ಕ ಆಸ್ಪತ್ರೆಯ ಕ್ಯಾಂಟೀನ್, ಹಾಸ್ಟೆಲ್ ಅಡುಗೆ ಕೋಣೆಗೆ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ಭೇಟಿ ; ಪರಿಶೀಲನೆ ಸುರತ್ಕಲ್: ಆರೋಗ್ಯ…

24 hours ago

ಉಡುಪಿ : ನೇರ ಸಂದರ್ಶನ – vishwanews24

ಉಡುಪಿ : ನೇರ ಸಂದರ್ಶನ      ಉಡುಪಿ: ನಗರದ ಕಲ್ಸಂಕ ಅಂಬಾಗಿಲು ರಸ್ತೆಯ ಗುಂಡಿಬೈಲಿನಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ನವೆಂಬರ್ 13 ರಂದು…

24 hours ago

ಬಂಟ್ವಾಳ: ಕೆಟ್ಟು ನಿಂತಿದ್ದ ಲಾರಿಯಲ್ಲಿ ಅಕ್ರಮ ಕೆಂಪು ಮಣ್ಣು ಸಾಗಾಟ ಪತ್ತೆ ; ಲಾರಿ ವಶಕ್ಕೆ – vishwanews24

ಬಂಟ್ವಾಳ : ರಸ್ತೆಯಲ್ಲೇ ಕೆಟ್ಟು ನಿಂತಿದ್ದ ಲಾರಿಯಲ್ಲಿ ಪರಿಶೀಲನೆ ವೇಳೆ ಅಕ್ರಮ ಮಣ್ಣು ಸಾಗಾಟ ಪತ್ತೆ ; ಲಾರಿ ವಶಕ್ಕೆ…

2 days ago

ಉತ್ತರ ಪ್ರದೇಶ : ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಬೆಂಕಿಗಾಹುತಿ ; ಆರು ಮಂದಿ ಸಜೀವ ದಹನ – vishwanews24

ಉತ್ತರ ಪ್ರದೇಶ : ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಬೆಂಕಿಗಾಹುತಿ ; ಆರು ಮಂದಿ ಸಜೀವ ದಹನ ಉತ್ತರ ಪ್ರದೇಶ…

2 days ago

ಹೊಸದಿಲ್ಲಿ: ಚಲಿಸುತ್ತಿದ್ದ ಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ; ಹೊತ್ತಿ ಉರಿದ ನಾಲ್ಕು ಬೋಗಿಗಳು ; ತಪ್ಪಿದ ಭಾರೀ ಅನಾಹುತ – vishwanews24

ಹೊಸದಿಲ್ಲಿ: ಚಲಿಸುತ್ತಿದ್ದ ಕರ್ಮಭೂಮಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ; ಹೊತ್ತಿ ಉರಿದ ನಾಲ್ಕು ಬೋಗಿಗಳು ; ತಪ್ಪಿದ ಭಾರೀ ಅನಾಹುತ…

5 days ago

ಉಡುಪಿ: ನ.29ರಂದು ಸೋದೆ ಪರ್ಯಾಯದ ಬಾಳೆ ಮುಹೂರ್ತ – vishwanews24

ಉಡುಪಿ: ನ.29ರಂದು ಸೋದೆ ಪರ್ಯಾಯದ ಬಾಳೆ ಮುಹೂರ್ತ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯ ದಲ್ಲಿ 2028-30ರ ಅವಧಿಯಲ್ಲಿ…

5 days ago