ಶಿಮ್ಲಾ: ಶಿಮ್ಲಾದ ಮಸ್ರುಂದ್-ಹಮಲ್ ರಸ್ತೆಯಲ್ಲಿ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಏಳು ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.
ಬುಧವಾರ ಮಧ್ಯರಾತ್ರಿ 2 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ವಾಹನದ ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಈ ಅಪಘಾತ ಸಂಭವಿಸಿದೆ. ಮೃತಪಟ್ಟವರೆಲ್ಲರೂ ಕುತೇಡ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಲ್ ಗ್ರಾಮದ ನಿವಾಸಿಗಳಾಗಿದ್ದಾರೆ. ಇವರೆಲ್ಲರೂ ಕಾಕ್ರೋಧಾ ಗ್ರಾಮದಲ್ಲಿ ನಡೆದ ಸಮಾರಂಭ ಮುಗಿಸಿಕೊಂಡು ಮನೆಗೆ ಹಿಂತಿರುಗುತ್ತಿದ್ದಾಗ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ.
ಅಪಘಾತದ ತೀವ್ರತೆಗೆ ಬೊಲೆರೊ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನದಲ್ಲಿದ್ದ ಮೂವರು ಮಹಿಳೆಯರು ಮತ್ತು ಮೂವರು ಪುರುಷರು ಸೇರಿ ಒಟ್ಟು ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು, ಜಿಲ್ಲಾಡಳಿತ ಅಧಿಕಾರಿಗಳು ಮತ್ತು ಸ್ಥಳೀಯ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿದರು. ಆದರೆ, ದಟ್ಟ ಕತ್ತಲೆ ಮತ್ತು ಕಡಿದಾದ ಗುಡ್ಡಗಾಡು ಪ್ರದೇಶವಾಗಿದ್ದರಿಂದ ಕಂದಕಕ್ಕೆ ಇಳಿದು ಮೃತದೇಹಗಳನ್ನು ಹೊರತೆಗೆಯಲು ರಕ್ಷಣಾ ತಂಡಗಳು ಹರಸಾಹಸ ಪಡಬೇಕಿತ್ತು.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…
ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್‌ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್‌ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…
ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ ಮುಂಬೈ:…
ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್…
ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ…
ಅನುಮತಿ ಇಲ್ಲದೆ ವ್ಯಕ್ತಿಯೊಬ್ಬರ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್‌ಐಆರ್ ಗೆ ಆದೇಶ ಬೆಂಗಳೂರು, : ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ…