ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಕಿಚ್ಚ ಸುದೀಪ್‌ ದಂಪತಿ ಭೇಟಿ – Vishwnaews24

Featured, ರಾಷ್ಟ್ರ ನ್ಯೂಸ್

ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಕಿಚ್ಚ ಸುದೀಪ್‌ ದಂಪತಿ ಭೇಟಿ

`ವಿಕ್ರಾಂತ್‌ರೋಣ’ ಚಿತ್ರದ ಸಕ್ಸಸ್ ನಂತರ ಕಿಚ್ಚ ಸುದೀಪ್ ಸದ್ಯ ಬಿಗ್ ಬಾಸ್ ಕಾರ್ಯಕ್ರಮದ ನಿರೂಪಣೆಯಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರೀಕರಣಕ್ಕೆ ಬ್ರೇಕ್ ಹಾಕಿ, ಕುಟುಂಬದ ಜೊತೆ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಸುದೀಪ್ ಭೇಟಿ ಕೊಟ್ಟಿದ್ದಾರೆ.

ಚಂದನವನದ ಪ್ರತಿಭಾನ್ವಿತ ನಟ ಕಿಚ್ಚ ಸುದೀಪ್, ವಿಕ್ರಾಂತ್ ರೋಣ ಚಿತ್ರದ ನಂತರ ಒಂದೊಳ್ಳೆ ಕಥೆಯ ಮೂಲಕ ಬರಲು ರೆಡಿಯಾಗಿದ್ದಾರೆ. ಚಿತ್ರದ ಆಯ್ಕೆ ಮತ್ತಷ್ಟು ಸೆಲೆಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ಬಿಗ್ ಬಾಸ್ ಶೋ ಶೂಟಿಂಗ್ ನಡುವೆ ಪತ್ನಿ ಜೊತೆ ವಿದೇಶಕ್ಕೆ ಹೋಗಿ, ಕ್ರಿಕೆಟ್ ಮ್ಯಾಚ್ ವೀಕ್ಷಿಸಿದ್ದರು. ಈ ಬೆನ್ನಲ್ಲೇ ಈಗ ಪತ್ನಿ ಪ್ರಿಯಾ ಜೊತೆ ಶಿರಡಿ ಸನ್ನಿಧಿಗೆ ಸುದೀಪ್ ಭೇಟಿ ನೀಡಿದ್ದಾರೆ.

ಪರೇಶ್ ಮೇಸ್ತಾ ಸಾವು ಪ್ರಕರಣ; ನ್ಯಾಯಾಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಕೆ – Vishwanews24

ತಮ್ಮ ಎಲ್ಲಾ ಕೆಲಸಕ್ಕೂ ಬ್ರೇಕ್ ಹಾಕಿ, ಪತ್ನಿ ಪ್ರಿಯಾ ಜೊತೆ ಶಿರಡಿಗೆ ಸುದೀಪ್ ತೆರಳಿದ್ದಾರೆ. ಸಾಯಿಬಾಬಾ ಸನ್ನಿಧಿಯಲ್ಲಿ ವಿಶೇಷ ಪೂಜೆ ಕೂಡ ಮಾಡಿಸಿದ್ದಾರೆ. ಈಗ ಶಿರಡಿಗೆ ಭೇಟಿ ಕೊಟ್ಟಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

ಇನ್ನೂ ಸುದೀಪ್, ಬಿಗ್ ಬಾಸ್ ಶೋ ಮುಕ್ತಾಯದ ನಂತರ ಡೈರೆಕ್ಟರ್ ನಂದಕಿಶೋರ್ ಜೊತೆ ಸಿನಿಮಾ ಮಾಡಲಿದ್ದಾರೆ. ಬಳಿಕ ರಮ್ಯಾ ಜೊತೆ ಕೂಡ ಕಿಚ್ಚ ನಟಿಸಲಿದ್ದಾರೆ ಎಂಬ ಸುದ್ದಿ ಸದ್ದು ಮಾಡುತ್ತಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ರಾಜ್ಯದಲ್ಲೇ ಪ್ರಪ್ರಥಮವಾಗಿ ಅಕ್ರಮ-ಸಕ್ರಮ ಅರ್ಜಿ ವಿಲೇವಾರಿ ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಅನುಷ್ಠಾನ : ಹರೀಶ ಪೂಂಜ – Vishwanews24

 

Leave a Reply