ಶಿರಸಿ: ಕಾಂಗ್ರೆಸ್ ಸೇರ್ಪಡೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರೆನ್ನಲಾದ ಕೂಡ್ಲಿಗಿಯ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಶಿರಸಿಯಲ್ಲಿ ಶುಕ್ರವಾರ ರಾಜೀನಾಮೆ ಸಲ್ಲಿಸಿದರು.
ಶಿರಸಿಯ ಕಚೇರಿಗೆ ಆಗಮಿಸಿದ್ದ ಶಾಸಕ ಗೋಪಾಲಕೃಷ್ಣ ಕಾಗೇರಿ ಅವರ ಬಳಿ ಉಭಯಕುಶಲೋಪರಿ ಮಾತನಾಡಿ, ನಂತರ ರಾಜೀನಾಮೆ ಪತ್ರ ಸಲ್ಲಿಸಿದರು. ಗೋಪಾಲಕೃಷ್ಣ ಅವರು ಮೂಲತಃ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.
ಗೋಪಾಲಕೃಷ್ಣ ಅವರು ನಾಲ್ಕು ಬಾರಿ ಶಾಸಕರಾಗಿ ಗೆದ್ದಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದ ಕಾರಣ ಬಿಜೆಪಿ ಪಕ್ಷ ಸೇರ್ಪಡೆಯಾಗಿ ಅಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದು ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು.
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…
ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅಭಿನಂದನೆ : ನೇರ ನೇಮಕಾತಿ , ನಗದು ಪುರಸ್ಕಾರ ಭಾರೀ ಹೆಚ್ಚಳ ಬೆಂಗಳೂರು:…
ನಕಲಿ ಔಷಧಿ ಖರೀದಿಸಿ ಮಾರಾಟ ಮಾಡಿದ್ದ ಫಾರ್ಮಾಗಳ ಮೇಲೆ SIT ದಾಳಿ; ನಕಲಿ ಮಾತ್ರೆಗಳು ಸೀಜ್ ಬೆಂಗಳೂರು: ನಕಲಿ ಔಷಧಿ ದಂಧೆ…
‘ಕಸದ ಚೀಲ’ದ ಮೂಲಕ ವಿಭಿನ್ನ ಕಥನ – ಉಡುಪಿಯ ಸುಮಂತ್ ಗಾಣಿಗ ಅವರ ಬರವಣಿಗೆಗೆ ಮೆಚ್ಚುಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…
ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…