ಶಿರಾಡಿಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ- ಅದೃಷ್ಟವಶಾತ್‌ ಚಾಲಕ ಪಾರು : ವಾಹನ ಸಂಚಾರ ಸ್ಥಗಿತ – vishwanews24

Featured, ರಾಜ್ಯ ನ್ಯೂಸ್

 ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಅದೃಷ್ಟವಶಾತ್‌ ಚಾಲಕ ಪಾರು – ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತ

ಸಕಲೇಶಪುರ: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್‌ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.

ಬೇಲೂರು ತಾಲೂಕಿನ ಬಿಕ್ಕೊಡು ಮೂಲದ ಶರತ್ ಎಂಬವರು ಮಂಗಳೂರು ಕಡೆಯಿಂದ ಸಕಲೇಶಪುರ ಮಾರ್ಗವಾಗಿ ಹಿಂತಿರುಗಿ ಬರುವ ಸಂದರ್ಭ ಜು.18ರ ಗುರುವಾರ ನಸುಕಿನ ಜಾವ 2.30ರ ಸಮಯಕ್ಕೆ ದೊಡ್ಡತಪ್ಪಲು ಸಮೀಪ ಭೂ ಕುಸಿತ ಉಂಟಾಗಿ ಕಾರಿನ ಮೇಲೆ ಬಿದ್ದಿದ್ದು ಕಾರು ಮಣ್ಣಿನ ರಾಶಿಯಲ್ಲಿ ಸಿಲುಕಿ ಸಂಪೂರ್ಣವಾಗಿ ಕುಸಿದಿದೆ.

ಉಪ್ಪಿನಂಗಡಿ: ಐರಾವತ ಬಸ್ ನಲ್ಲಿ ಆಕಸ್ಮಿಕ ಬೆಂಕಿ ; ತಪ್ಪಿದ ಅನಾಹುತ – vishwanews24

ಈ ಸಂದರ್ಭದಲ್ಲಿ ಅಲ್ಲೇ ಇದ್ದ ಹೆದ್ದಾರಿ ಕಾಮಗಾರಿ ಗುತ್ತಿಗೆದಾರ ಕಂಪನಿಯ ಬಿಹಾರ ಮೂಲದ ಕಾರ್ಮಿಕ ಅಖಿಲೇಶ್, ಶರತ್ ಅವರನ್ನು ವಾಹನದಿಂದ ಹೊರಗೆ ಕರೆತಂದು ಅವರ ಪ್ರಾಣ ಉಳಿಸಿದ್ದಾರೆ.

ಅಖಿಲೇಶ್ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಶರತ್ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭೂ ಕುಸಿತದಿಂದ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ 5-5 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿದ್ದು, ಮಣ್ಣು ತೆರವು ಗೊಳಿಸುವ ಕಾರ್ಯ ನಡೆಯುತ್ತಿದೆ.

ಮಂಗಳೂರು/ಉಡುಪಿ: ಜಿಲ್ಲೆಗಳಲ್ಲಿ ಜುಲೈ 18, 19 ರಂದು ರೆಡ್ ಅಲರ್ಟ್ – vishwanews24

Leave a Reply