ಹಾಸನ: ಕಳೆದ ಕೆಲವು ದಿನಗಳ ಆತಂಕದ ಬಳಿಕ ಶಿರಾಡಿಘಾಟ್ ಸಂಚಾರಕ್ಕೆ ಮುಕ್ತವಾಗಿದ್ದು, ದಿನದ 24 ಗಂಟೆಯೂ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.
ಮಲೆನಾಡಿನಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ವಾಹನಗಳ ಓಡಾಟಕ್ಕೆ ಜಿಲ್ಲಾಡಳಿತ ಅವಕಾಶ ಮಾಡಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಹಲವು ಭಾರಿ ಗುಡ್ಡ ಕುಸಿದಿದ್ದ ಸ್ಥಳದಲ್ಲಿ ಮಣ್ಣನ್ನು ತೆರವು ಮಾಡಿ ಆತಂಕ ನಿವಾರಣೆ ಮಾಡಲಾಗಿದೆ. ಈ ಹಿನ್ನಲೆ ವಾಹನಗಳು ಸಂಚರಿಸಲು ಅನುವು ಮಾಡಿಕೊಡಲಾಗಿದೆ.
ಹಲವು ವಾಹನಗಳ ಮೇಲೆ ಮಣ್ಣು ಕುಸಿದಿದ್ದು, ಗುಡ್ಡ ಕುಸಿದಿದ್ದರಿಂದ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಇದೀಗ ವಾಹನಗಳ ಓಡಾಟದ ಬಗ್ಗೆ ಸಕಲೇಶಪುರ ಎಸಿ ಶೃತಿ ಅವರು ಮಾಹಿತಿ ನೀಡಿದ್ದಾರೆ.
ಎರಡು ದಿನದಿಂದ ಮಳೆಯ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಹೀಗಾಗಿ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆದರೂ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ರೆಸ್ಕ್ಯೂ ಟೀಂ ನಿಯೋಜನೆ ಮಾಡಿದ್ದೇವೆ. ಪೊಲೀಸ್ ಅಧಿಕಾರಿಗಳು, ಎನ್ಹೆಚ್ ಟೀಂ ದಿನದ 24 ಗಂಟೆಯೂ ಸ್ಥಳದಲ್ಲಿರಲಿದೆ. ಯಾವುದೇ ಅವಘಡ ಸಂಭವಿಸದಂತೆ ಎಚ್ಚರ ವಹಿಸಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ ಎಂದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…