Featured

ಶಿರಾಡಿ: ಘಾಟಿಯಲ್ಲಿ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್‌ ಪಲ್ಟಿಯಾಗಿ ಗ್ಯಾಸ್‌ ಸೋರಿಕೆ – Vishwanews24

ಶಿರಾಡಿ: ಘಾಟಿಯಲ್ಲಿ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್‌ ಪಲ್ಟಿಯಾಗಿ ಗ್ಯಾಸ್‌ ಸೋರಿಕೆ

ಶಿರಾಡಿ: ಬೆಂಗಳೂರು -ಮಂಗಳೂರು ರಾಷ್ಟ್ರೀಯ ಹೆದ್ದಾರಿ -75ರ ಶಿರಾಡಿಘಾಟ್‌ನಲ್ಲಿ ಅನಿಲ ಸಾಗಿಸುತ್ತಿದ್ದ ಟ್ಯಾಂಕರ್ ವೊಂದು ಪಲ್ಟಿಯಾಗಿ ಟ್ಯಾಂಕ‌ರ್‌ನಿಂದ ಗ್ಯಾಸ್ ಸೋರಿಕೆಯಾಗುತ್ತಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.

ಶಿರಾಡಿಘಾಟ್ ರಸ್ತೆಯ ಡಬಲ್ ಕ್ರಾಸ್ ಸನಿಹದ ಹೆದ್ದಾರಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ಸಿಗದೆ ಗ್ಯಾಸ್ ಟ್ಯಾಂಕರ್ ವೊಂದು ಪಲ್ಟಿಯಾಗಿ ಗ್ಯಾಸ್ ಸೋರಿಕೆಯಾಗುತ್ತಿದೆ. ಮುನ್ನಚ್ಚರಿಕಾ ಕ್ರಮವಾಗಿ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದ್ದು, ನೂರಾರು ವಾಹನ ಸವಾರರು ಸೋರಿಕೆ ಸ್ಥಗಿತಗೊಳಲು ಕಾಯುತ್ತಿದ್ದಾರೆ.

ಮಂಗಳೂರು-ಹಾಸನ-ಬೆಂಗಳೂರು ಮಾರ್ಗದಲ್ಲಿ ಸಂಚರಿಸುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಪೊಲೀಸರು ಕಳುಹಿಸುತ್ತಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ಪೊಲೀಸರು ತಲುಪಿದೆ. ಆದ್ರೆ ಸೋರಿಕೆ ಪರೀಕ್ಷೆಗೆ ಮಂಗಳೂರಿನ ಎಮ್. ಆರ್. ಪಿ. ಎಲ್ ನಿಂದ ತಜ್ಞರ ತಂಡ ಇನ್ನಷ್ಟೇ ಘಟನಾ ಸ್ಥಳಕ್ಕೆ ತಲುಪಬೇಕಿದೆ.

ಮಂಗಳೂರು ಧರ್ಮಸ್ಥಳಕ್ಕೆ ತೆರಳುವವರು ಸಕಲೇಶಪುರದಿಂದ ಹಾನುಬಾಳು ಮಾರ್ಗವಾಗಿ ಮೂಡಿಗೆರೆ ಮೂಲಕ ತೆರಳಲು ಸೂಚನೆ ನೀಡಲಾಗಿದೆ. ಮಂಗಳೂರಿನಿಂದ ಹಾಸನ ಬೆಂಗಳೂರಿಗೆ ತೆರಳುವವರು ಗುಂಡ್ಯ ಬಿಸ್ಲೆ ಹಾಗೂ ಚಾರ್ಮಾಡಿ ಮಾರ್ಗವಾಗಿ ತೆರಳಲು ಸೂಚನೆ ನೀಡಲಾಗಿದೆ. ಪಲ್ಟಿಯಾದ ಗ್ಯಾಸ್ ಟ್ಯಾಂಕರ್‌ನಿಂದ ಭಾರಿ ಪ್ರಮಾಣದಲ್ಲಿ ಗ್ಯಾಸ್ ಸೋರಿಕೆಯಾಗಿದೆ. ಹೀಗಾಗಿ ಗ್ಯಾಸ್ ಟ್ಯಾಂಕರ್ ತೆರವು ಕಾರ್ಯಾಚರಣೆ ಮುಗಿಯುವವರೆಗೂ ಎಲ್ಲಾ ವಾಹನಗಳ ಸಂಚಾರ ಬಂದ್ ಆಗಲಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago