ಸಕಲೇಶಪುರ: ತಾಲೂಕಿನ ಶಿರಾಡಿ ಘಾಟ್ ವ್ಯಾಪ್ತಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಇನ್ನೋವಾ ಹಾಗೂ ಕಂಟೈನರ್ ನಡುವೆ ಢಿಕ್ಕಿ ಸಂಭವಿಸಿ ತಾಯಿ – ಮಗ ಸಾವನ್ನಪ್ಪಿ, ಇತರರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮಂಗಳವಾರ(ಮೇ.21 ರಂದು) ನಡೆದಿದೆ.
ಕಾರಿನಲ್ಲಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಪಾಣೆ ಮಂಗಳೂರು ಸಮೀಪದ ಬೊಂಡಲ ಗ್ರಾಮದ ಮೂಲದ ಶಬೀರ್ ಅಹಮ್ಮದ್ ಎಂಬುವರ ಪತ್ನಿ ಶಫಿಯ (48) ಹಾಗೂ ಅವರ ಪುತ್ರ ಶಫೀಕ್ (21) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕಾರಿನಲ್ಲಿ ಮಕ್ಕಳು ಸೇರಿ 6 ಮಂದಿ ಇದ್ದರು ಎನ್ನಲಾಗಿದ್ದು, ಎಲ್ಲರಿಗೂ ಗಂಭೀರ ಸ್ವರೂಪದ ಗಾಯಗಳಾಗಿದೆ. ಸದ್ಯ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಮಾರನಹಳ್ಳಿ ಇಂದ ಸುಮಾರು ಎಂಟು ಕಿಲೋಮೀಟರ್ ದೂರದ ಶಿರಾಡಿ ಘಾಟಿನಲ್ಲಿ ಮಂಗಳವಾರ ಬೆಳಿಗ್ಗೆ 6.30ರ ಸಮಯದಲ್ಲಿ ಸಕಲೇಶಪುರದಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು ಹಾಗೂ ಮಂಗಳೂರು ಕಡೆಯಿಂದ ಬರುತ್ತಿದ್ದ ಕಂಟೈನರ್ ಲಾರಿ ನಡುವೆ ಢಿಕ್ಕಿ ಸಂಭವಿಸಿ ಈ ದುರಂತ ಘಟನೆ ಸಂಭವಿಸಿದೆ.
ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…