ಮಂಗಳೂರು: ಮಳೆಯಿಂದಾಗಿ ಶಿರಾಡಿ ಘಾಟ್ ನಲ್ಲಿ ಭೂಕುಸಿತ ಉಂಟಾಗಿದ್ದು. ಈ ಹಿನ್ನಲೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಇದು ಮಂಗಳೂರು ಬೆಂಗಳೂರು ನಡುವೆ ಸಂಚರಿಸುವ ಜನರಿಗೆ ಸಂಕಷ್ಟ ತಂದೊಡ್ಡಿದ್ದು, ಈ ಹಿನ್ನಲೆ ಮಂಗಳೂರು-ಬೆಂಗಳೂರು ನಡುವೆ ಹೆಚ್ಚುವರಿ ರೈಲು ಸಂಚಾರ ಆರಂಭಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಶ್ಣವ್ ಅವರನ್ನು ಸೋಮವಾರ ನವದೆಹಲಿಯಲ್ಲಿ ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಿದ್ದಾರೆ. ‘ನನ್ನ ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವರು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ’ ಎಂದು ನಳಿನ್ ಕುಮಾರ್ ಕಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು- ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಬಳಿ ಭೂಕುಸಿತ ಉಂಟಾಗಿದ್ದರಿಂದ ಜುಲೈ15ರಿಂದ ಶಿರಾಡಿ ಘಾಟಿಯಲ್ಲಿ ಎಲ್ಲ ರೀತಿಯ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಕೆಲ ಷರತ್ತಿನೊಂದಿಗೆ ಕಾರು, ಜೀಪು, ಸೇರಿದಂತೆ ಸಣ್ಣ ವಾಹನಗಳಿಗೆ ಬದಲಿ ಮಾರ್ಗದಲ್ಲಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…