ಕಾರವಾರ: ಶಿರೂರು ಭೂ ಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ಬಿದ್ದ ಟ್ರಕ್ ಕೊನೆಗೂ ಪತ್ತೆಯಾಗಿದೆ.
ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್ ಚಲಾಯಿಸುತ್ತಿದ್ದ ಟ್ರಕ್ ಗಂಗಾವಳಿ ನದಿಗೆ ಬಿದ್ದಿತ್ತು.
ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಇದ್ದ ಕಾರಣ ಟ್ರಕ್ ಪತ್ತೆ ಮಾಡಲು ಕಷ್ಟವಾಗಿತ್ತು. ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಟ್ರಕ್ ಪತ್ತೆಗೆ ನಿರಂತರ ಪ್ರಯತ್ನ ನಡೆಸುತ್ತಿದ್ದರು.
ಈಗ ಟ್ರಕ್ ಗುಡ್ಡ ಕುಸಿತಗೊಂಡ ಜಾಗದ ಬಳಿಯೇ ಸಿಕ್ಕಿ ಬಿದ್ದಿದೆ. ಟ್ರಕ್ ಮೇಲೆ ಸಾಕಷ್ಟು ಕಲ್ಲು ಮತ್ತು ಮಣ್ಣುಗಳಿವೆ. ಹೀಗಾಗಿ ಮಣ್ಣು ಮತ್ತು ಕಲ್ಲುಗಳನ್ನು ತೆಗೆದು ಟ್ರಕ್ ಮೇಲಕ್ಕೆ ಎತ್ತಲು ಸಿದ್ಧತೆ ನಡೆಯುತ್ತಿದೆ.
ಜುಲೈ 16 ರಂದು ಭೂಕುಸಿತ ಸಂಭವಿಸಿದಾಗ ಅರ್ಜುನ್ ಮರ ತುಂಬಿಸಿಕೊಂಡು ಟ್ರಕ್‌ನಲ್ಲಿ ಕೋಝಿಕ್ಕೋಡ್ ಕಡೆಗೆ ಹೋಗುತ್ತಿದ್ದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…