ಶಿರೂರು: ಮೀನುಗಾರಿಕೆಗೆ ತೆರಳಿ ವಾಪಾಸ್ಸು ಬರುವ ವೇಳೆ ದೋಣಿ ಮಗುಚಿ ಇಬ್ಬರು ಮೀನುಗಾರರು ಪ್ರಾಣ ಕಳೆದುಕೊಂಡ ಘಟನೆ ಶಿರೂರು ಕಳುವಿತ್ಲುವಿನಲ್ಲಿ ನಡೆದಿದೆ.
ಹಡವಿನಕೋಣೆ ಶಿರೂರಿನ ನನ್ನು ಅಬ್ಸುಲ್ ಸತ್ತರ್ (45 ) ಹಾಗೂ ಕುದ್ವಾಯಿ ರೋಡ್, ಭಟ್ಕಳ ನಿವಾಸಿ ಮಿಸ್ಬಾ ಯೂಸುಫ್ (48) ಎನ್ನಲಾಗಿದೆ.
ಭಾನುವಾರ ರಾತ್ರಿ 10-00 ಗಂಟೆಗೆ ಶಿರೂರು ಕಳುಹಿತ್ಲುನಿಂದ ಮೀನುಗಾರಿಕೆಗೆ ತೆರಳಿದ ನುಮೈರಾ ಅಂಜುಮ್ IND KA 03 MO-4827 ದೋಣಿಯಲ್ಲಿ 3 ಜನ ಮೀನುಗಾರರಿದ್ದರು. ಸೋಮವಾರ ಮೀನುಗಾರಿಕೆ ನಡೆಸಿ ವಾಪಾಸ್ಸು ಬರುವಾಗ ಮುಂಜಾನೆ 1.30 ಗಂಟೆ ವೇಳೆಗೆ ಶಿರೂರು ಕಳುಹಿತ್ಲು ಅಳಿವೆ ಸಮೀಪ ಅರಬ್ಬೀ ಸಮುದ್ರದಲ್ಲಿ ದೋಣಿ ಮಗುಚಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ದೋಣಿಯಲ್ಲಿದ್ದ ಮತ್ತೋರ್ವ ಬುಡ್ಡು ಮುಖ್ತಾರ್ ಹಡವಿನಕೋಣೆ ಇವರನ್ನು ಇನ್ನೊಂದು ದೋಣಿಯಲ್ಲಿದ್ದ ಮಾಮ್ಸು ಯಾಕೂಬ್ ರವರು ರಕ್ಷಣೆ ಮಾಡಿದ್ದಾರೆ.
ಈ ಭಾಗದಲ್ಲಿ ಕೆಲವೆ ತಿಂಗಳುಗಳ ಹಿಂದೆ ಇಬ್ಬರು ಮೀನುಗಾರರು ಸಮುದ್ರ ಪಾಲಾಗಿದ್ದು ಈ ವರ್ಷ ಬೈಂದೂರು ಭಾಗದಲ್ಲಿ ಅತ್ಯಧಿಕ ಮೀನುಗಾರಿಕಾ ದುರಂತಗಳು ನಡೆದಿದೆ.
ಕರಾವಳಿ ಕಾವಲು ಪಡೆ ಹಾಗೂ ಆರಕ್ಷಕ ಸಿಬಂಧಿಗಳು ಆಗಮಿಸಿದ್ದು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…