ಬೆಂಗಳೂರು: ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಸ್ವಾಮೀಜಿಗಳ ಅಕಾಲಿಕ ನಿಧನಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಅವಶ್ಯವೆಂದರೆ ತನಿಖೆ ಅನಿವಾರ್ಯ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಉಡುಪಿ ಅಷ್ಟಮಠಗಳಲ್ಲಿ ಒಂದಾಗಿರುವ ಶಿರೂರು ಶ್ರೀಗಳ ಅಕಾಲಿಕ ನಿಧನ ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ನಷ್ಟವನ್ನುಂಟುಮಾಡಿದೆ. ಅವರ ಸಾವಿನ ಬಗ್ಗೆ ಕೇಳಿಬರುತ್ತಿರುವ ಅನುಮಾನಗಳಿಗೆ ಅವಶ್ಯವೆಂದರೆ ತನಿಖೆ ಅನಿವಾರ್ಯ ಎಂದು ಹೇಳಿದ್ದಾರೆ.
ಶಿರೂರು ಲಕ್ಷ್ಮೀವರ ತೀರ್ಥರ ಜತೆ ಅಷ್ಠಮಠದ ಇತರೆ ಸ್ವಾಮಿಗಳ ಜತೆ ಉತ್ತಮ ಬಾಂಧವ್ಯ ಇರಲಿಲ್ಲ. ಅಷ್ಟ ಮಠಗಳ ಪೀಠಾಧೀಶರು ಶಿರೂರು ಶ್ರೀಗಳಿಗೆ ಪೀಠದಿಂದ ಇಳಿಯುವಂತೆ ಒತ್ತಡ ಹೇರಿದ್ದರು. ಆದರೆ ಪೀಠದಿಂದ ಇಳಿಯುವುದಿಲ್ಲ ಎಂದು ಕಾನೂನು ಹೋರಾಟ ಮಾಡುತ್ತೇನೆ ಎಂದು ಶಿರೂರು ಸ್ವಾಮಿ ಹೇಳಿದ್ದರು. ಜತೆಗೆ ತಮಗೆ ಜೀವ ಬೆದರಿಕೆ ಇದೆ, ತಮಗೆ ಗನ್ ಮ್ಯಾನ್ ಅವಶ್ಯಕತೆಯಿದೆ ಎಂದು ಅವರು ಆಪ್ತರಲ್ಲಿ ಹೇಳಿಕೊಂಡಿದ್ದರು. ಈಗ ಅವರ ಸಾವು ಹಲವು ಬಗೆಯ ಶಂಕೆಗಳಿಗೆ ಎಡೆ ಮಾಡಿಕೊಡುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶಂಕೆ ಇದ್ದಲ್ಲಿ ತನಿಖೆಗೆ ಆದೇಶಿಸಲಾಗುವುದು ಎಂದು ತಿಳಿಸಿದ್ದಾರೆ.
ಸಾವಿನ ಬಗ್ಗೆ ಶಂಕೆ ಇದ್ದಲ್ಲಿ ತನಿಖೆಗೆ ಆದೇಶಿಸಬೇಕಾಗುತ್ತದೆ. ಶೀರೂರು ಶ್ರೀ ಅಸಹಜ ಸಾವು ಶಂಕೆಯಿದ್ದಲ್ಲಿ ತನಿಖೆಗೆ ನೀಡಲಾಗುವುದು. ಈ ರೀತಿಯ ಪ್ರಕರಣಗಳಲ್ಲಿ ಅನಿವಾರ್ಯವಾಗಿ ತನಿಖೆಗೆ ಆದೇಶಿಸಬೇಕಾಗುತ್ತದೆ. ಇದುವರೆಗೂ ಶ್ರೀಗಳ ಸಾವು ಅಸಹಜ ಎಂಬ ದೂರು ಬಂದಿಲ್ಲ. ಹಾಗೇನಾದರೂ ದೂರು ಬಂದಲ್ಲಿ ಶೀಘ್ರ ಕ್ರಮ ತೆಗೆದುಕೊಳ್ಳುತ್ತೇವೆ,” ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇನ್ನು ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವ ಡಾ. ಜಿ ಪರಮೇಶ್ವರ್ ಕೂಡ ಪ್ರತಿಕ್ರಿಯೆ ನೀಡಿದ್ದು, ವಿಷ ಉಣಿಸಲಾಗಿದೆ ಎಂಬ ಸಂಶಯ ಭಕ್ತಾದಿಗಳಿಂದ ಮತ್ತು ಸ್ಥಳೀಯರಿಂದ ಕೇಳಿ ಬರುತ್ತಿದೆ. ಶಂಕೆ ನಿಜವಾದಲ್ಲಿ ಮುಂದಿನ ಕ್ರಮಕ್ಕೆ ಚಿಂತನೆ ನಡೆಸಲಾಗುವುದು ಎಂದು ಪ್ರತಿಕ್ರಿಯಿಸಿದ್ದರು.
ಉಡುಪಿಯ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿಯವರು ದೈವಾಧೀನರಾಗಿರುವುದು ಮನಸ್ಸಿಗೆ ಅತೀವ ನೋವು ತಂದಿದೆ. ಜನರ ಜೊತೆ ಸಾಮಾನ್ಯರಂತೆ ಬೆರೆಯುತ್ತಿದ್ದ ಹಾಗೂ ಶ್ರೀಕೃಷ್ಣನ ಸೇವೆಯಲ್ಲಿ ಅಪಾರ ಶ್ರದ್ಧೆ ಹೊಂದಿದ್ದ ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಉಡುಪಿ ಶಾಸಕ ರಘುಪತಿ ಭಟ್ ಸಹ ಸಂತಾಪ ಸೂಚಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…