Featured

ಶಿರೂರು ಶ್ರೀ ಅಸಹಜ ಸಾವು ಪ್ರಕರಣ : ನಾಪತ್ತೆಯಾಗಿದ್ದ ಮಠದ ಸಿಸಿಟಿವಿ ಡಿವಿಆರ್ ಸ್ವರ್ಣಾ ನದಿಯಲ್ಲಿ ಪತ್ತೆ!

ಶ್ರೀಗಳು ಆಸ್ಪತ್ರೆ ಸೇರಿದ ಬಳಿಕ ಶ್ರೀಗಳು ಧರಿಸುತ್ತಿದ್ದ ಆಭರಣಗಳೂ ಸೇರಿ ಮಠದಲ್ಲಿದ್ದ 3 ಕೆಜಿ ಚಿನ್ನಾಭರಣ ಕೂಡ ನಾಪತ್ತೆ
ಉಡುಪಿ: ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಅವರ ಅಸಹಜ ಸಾವು ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಈ ಹಿಂದೆ ನಾಪತ್ತೆಯಾಗಿದ್ದ ಮಠದ ಸಿಸಿಟಿವಿ ಡಿವಿಆರ್ ಸ್ವರ್ಣಾ ನದಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಮಾಧ್ಯಮಗಳು ವರದಿ ಮಾಡಿರುವಂತೆ ಇಂದು ಮುಂಜಾನೆ ಸ್ವರ್ಣಾ ನದಿಯಲ್ಲಿ ಸಿಸಿಟಿವಿ ಡಿವಿಆರ್ ಪತ್ತೆಯಾಗಿದ್ದು, ತೆಪ್ಪದಲ್ಲಿ ತೆರಳಿದ್ದ ಮುಳುಗು ತಜ್ಞರು ದೊಡ್ಡ ಅಯಸ್ಕಾಂತದ ಮೂಲಕ ಡಿವಿಆರ್ ಅನ್ನು ನೀರಿನಿಂದ ಮೇಲೆತ್ತಿದ್ದಾರೆ ಎಂದು ಹೇಳಲಾಗಿದೆ. ನಾಪತ್ತೆಯಾಗಿದ್ದ ಡಿವಿಆರ್ ಗಾಗಿ ಸೋಮವಾರ ಸಂಜೆಯಿಂದಲೇ ಹುಡುಕಾಟ ಆರಂಭಿಸಲಾಗಿತ್ತು. ಮಠಕ್ಕೆ ಸಮೀಪದಲ್ಲೇ ಇರುವ ಸ್ವರ್ಣಾ ನದಿಯಲ್ಲಿ ಡಿವಿಆರ್ ಅನ್ನು ಎಸೆದಿರುವ ಸಾದ್ಯತೆ ಮೇರೆಗೆ ನದಿಯಲ್ಲಿ ಮುಳುಗು ತಕ್ಷರ ನೆರವಿನಿಂದ ಹುಡುಕಾಟ ಆರಂಭಿಸಲಾಗಿತ್ತು. ಇದೀಗ ಡಿವಿಆರ್ ಪತ್ತೆ ಮಾಡುವಲ್ಲಿ ಕೊನೆಗೂ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
ಸಾವಿನ ಸಂಚು ಹೂಡಿದ್ದ ಸ್ವಾಮೀಜಿಯ ನಿಕಟವರ್ತಿಗಳೇ ಡಿವಿಆರ್‌ ಅನ್ನು ನದಿಗೆ ಎಸೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಡಿವಿಆರ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿ ಅದರಲ್ಲಿರುವ ಮಾಹಿತಿ ಸಂಗ್ರಹಿಸಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
ಶಿರೂರು ಸ್ವಾಮೀಜಿ ಚಿನ್ನಾಭರಣ ನಾಪತ್ತೆ
ಇನ್ನು ಶಿರೂರು ಶ್ರೀಗಳ ಅಸಹಜ ಸಾವಿಗೆ ಮತ್ತೊಂದು ಟ್ವಿಸ್ಟ್ ದೊರೆತಿದ್ದು, ಅನಾರೋಗ್ಯದ ಕಾರಣ ಶ್ರೀಗಳು ಆಸ್ಪತ್ರೆ ಸೇರಿದ ಬೆನ್ನಲ್ಲೇ ಮಠದಲ್ಲಿದ್ದ ಸುಮಾರು 3 ಕೆಜಿಯಷ್ಟು ಚಿನ್ನಾಭರಣಗಳು ನಾಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಈ ಮೂರು ಕೆಜಿ ಚಿನ್ನಾಭರಣಗಳಲ್ಲಿ ಶ್ರೀಗಳು ನಿತ್ಯ ಧರಿಸುತ್ತಿದ್ದ ಸುಮಾರು 1 ಕೆಜಿಯಷ್ಟು ಚಿನ್ನಾಭರಣಗಳೂ ಸೇರಿವೆ ಎನ್ನಲಾಗಿದೆ. ಇದೇ ಆಭರಣಗಳನ್ನು ಪ್ರಸ್ತುತ ಪೊಲೀಸರು ಶಂಕೆ ವ್ಯಕ್ತಪಡಿಸುತ್ತಿರುವ ಶಂಕಿತ ಮಹಿಳೆ ರಮ್ಯಾ ಶೆಟ್ಟಿ ಅವರೂ ಧರಿಸುತ್ತಿದ್ದರು ಎನ್ನಲಾಗಿದೆ.
Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago