Featured

ಶಿರೂರು : ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣ :  5 ಮೃತದೇಹ ಪತ್ತೆ; ಉಳಿದವರಿಗಾಗಿ ಹುಡುಕಾಟ – vishwanews24

ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣ :  5 ಮೃತದೇಹ ಪತ್ತೆ; ಉಳಿದವರಿಗಾಗಿ ಹುಡುಕಾಟ

ಕಾರವಾರ: ಅಂಕೋಲಾ ಶಿರೂರು ಬಳಿ ಹೆದ್ದಾರಿಯಲ್ಲಿ ಭಾರಿ ಗುಡ್ಡ ಕುಸಿದು ಹತ್ತು ಮಂದಿ ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಸ್ಥಳದಲ್ಲಿ ಐದು ಮಂದಿಯ ಮೃತದೇಹಗಳು ಪತ್ತೆಯಾಗಿವೆ.

ಇಂದು ಮುಂಜಾನೆಯಿಂದ ಮತ್ತೆ ಮೃತದೇಹಗಳ ಪತ್ತೆ ಕಾರ್ಯಾಚರಣೆಯನ್ನು ಎರಡು ಹಿಟಾಚಿ, ಎರಡು ಜೆಸಿಬಿ ಯಂತ್ರಗಳ ಮೂಲಕ ಆರಂಭಿಸಲಾಗಿದೆ. ಮಣ್ಣಿನ ಅಡಿ 10 ಮಂದಿ ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿತ್ತು. ಈಗಾಗಲೇ 5 ಮಂದಿಯ ಮೃತದೇಹವನ್ನು ಪತ್ತೆ ಮಾಡಲಾಗಿದ್ದು, ಇನ್ನುಳಿದವರ ಮೈತದೇಹಗಳಿಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ.

ನಿನ್ನೆ ಮಹಿಳೆಯೊಬ್ಬರ ಮೃತದೇಹ ಪತ್ತೆಯಾತಗಿತ್ತು. ನಿನ್ನೆ ಕತ್ತಲಾದ್ದರಿಂದ ಹಾಗೂ ಮಳೆಯ ಕಾರಣ ಕಾರ್ಯಾಚರಣೆ ನಿಲ್ಲಿಸಲಾಗಿತ್ತು.

ಭಾರಿ ಪ್ರಮಾಣದಲ್ಲಿ ಗುಡ್ಡದ ಮಣ್ಣು ಹೆದ್ದಾರಿಗೆ ಕುಸಿದಿರುವುದರಿಂದ ಈ ದುರ್ಘಟನೆ ನಡೆದಿದೆ. ಮಣ್ಣು ತೆರವು ಕಾರ್ಯಾಚರಣೆಗೆ ಹತ್ತಾರು ಲಾರಿಗಳನ್ನು ಬಳಸಲಾಗುತ್ತಿದೆ. ರಕ್ಷಣಾ ಕಾರ್ಯದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸ್, ಎನ್‌ಡಿಆರ್‌ಎಫ್ ತಂಡ ಪಾಲ್ಗೊಂಡಿದೆ.

ಭೂಕುಸಿತ ಪ್ರದೇಶದಲ್ಲೇ ಸಡಿಲಗೊಂಡಿರುವ ಗುಡ್ಡ ಮತ್ತೆ ಬಿರುಕು ಬಿಟ್ಟಿದೆ. ಹೀಗಾಗಿ ಯಾವುದೇ ಕ್ಷಣದಲ್ಲೂ ಮತ್ತೆ ಕುಸಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಗುಡ್ಡದ ಮದ್ಯ ಭಾಗದಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ರಸ್ತೆಯ ಪಕ್ಕದಲ್ಲಿರುವ ಹೊಳೆಗೆ ಮಣ್ಣು ಕೊಚ್ಚಿ ಹೋಗುತ್ತಿದೆ. ಇದರಿಂದಾಗಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗುತ್ತಿದೆ. ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯು ಈ ಅವಘಡಕ್ಕೆ ಕಾರಣವಾಗಿದ್ದು, ಇನ್ನಷ್ಟು ಜನರನ್ನು ಬಲಿ ಪಡೆಯುವ ಭೀತಿ ಎದುರಾಗಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

7 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

7 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

8 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

8 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

10 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

10 hours ago