Featured

ಶಿರ್ವ: ಅನಾರೋಗ್ಯ ಪೀಡಿತ ಬಾಲಕನಿಗೆ ಬೇಕಿದೆ ನೆರವಿನ ಹಸ್ತ – vishwanews24

ಶಿರ್ವ: ಅನಾರೋಗ್ಯ ಪೀಡಿತ ಬಾಲಕನಿಗೆ ಬೇಕಿದೆ ನೆರವಿನ ಹಸ್ತ

ಶಿರ್ವ : ಹಲವು ವರ್ಷಗಳಿಂದ ಅನಾರೋಗ್ಯ ಪೀಡಿತನಾಗಿ ಹಾಸಿಗೆ ಹಿಡಿದಿರುವ ಬಡ ಕುಟುಂಬದ ಶಿರ್ವ ಗ್ರಾಮದ ಮಟ್ಟಾರು ಕಡಂಬು ನಿವಾಸಿ ಅರುಣ್ ಕುಮಾರ್ ಅವರ ಪುತ್ರ 16ರ ಹರೆಯದ ಬಾಲಕ ದೀಶಿತ್ ಕುಮಾರ್ ಅವರಿಗೆ ಸಹೃದಯರ ಸಹಾಯಹಸ್ತ ಬೇಕಿದೆ. ದೀಶಿತ್ ಕುಮಾರ್ ಅಪಸ್ತಾರ (Epilepsy) ಕಾಯಿಲೆಯಿ೦ದ ಬಳಲುತ್ತಿದ್ದು, ಊರವರು ಮತ್ತು ಹಿತೈಷಿಗಳ ಸಹಾಯದಿಂದ ಬಾಲಕನಿಗೆ ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು ಇನ್ನೂ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದೆ.

ಹೆತ್ತವರಿಗೆ ಯಾವುದೇ ಸಂಪಾದನೆಯ ಮೂಲವಿಲ್ಲದೆ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದ ಕಾರಣ ಆಸ್ಪತ್ರೆಯ ಚಿಕಿತ್ಸೆ ವೆಚ್ಚ ಭರಿಸಲಾಗದೆ ಮನೆಯಲ್ಲಿಯೇ ಹಾಸಿಗೆ ಹಿಡಿದಿದ್ದಾನೆ. ಬೆಂಗಳೂರಿನ ಹೆಲ್ತ್‌ ಕೇರ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯ ಡಾ| ರಾಘವೇಂದ್ರ ಎಸ್.ಸುಮಾರು 11 ಲ.ರೂಗಳ ಅಗತ್ಯವಿದೆ ಎಂದು ತಿಳಿಸಿದ್ದು ಹೆತ್ತವರು ಚಿಕಿತ್ಸೆಯ ವೆಚ್ಚ ಭರಿಸುವ ಸ್ಥಿತಿಯಲ್ಲಿಲ್ಲ. ಬಾಲಕನ ತಂದೆ ಅರುಣ್ ಕುಮಾರ್ ಕೂಡಾ ಅಂಗವಿಕಲನಾಗಿದ್ದು, ಈಗಾಗಲೇ ಮಗನ ಚಿಕಿತ್ಸೆಗಾಗಿ ಸಾಲ ಮಾಡಿ ಹಲವಾರು ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ. ಬಡ ಕುಟುಂಬದ ಜೀವನ ನಿರ್ವಹಣೆಯೂ ಸೇರಿದಂತೆ ಬಾಲಕನ ಚಿಕಿತ್ಸೆಗಾಗಿ ದಾನಿಗಳ ನೆರವಿನ ಅಗತ್ಯವಿದೆ.

ಕುಟುಂಬಕ್ಕೆ ಬಡ ಅಸಹಾಯಕ ಸಹಾಯ ಮಾಡಲಿಚ್ಚಿಸುವವರು ದೀಶಿತ್ ಕುಮಾರ್ ಕುಮಾರ್ ಅವರ ತಂದೆ ಅರುಣ್ ಕುಮಾರ್ ಅವರ ಶಿರ್ವ ಬ್ಯಾಂಕ್ ಆಫ್ ಬರೋಡಾ ಶಾಖೆಯ ಎಸ್.ಬಿ.ಖಾತೆ 81800100001057 (ISFC code BARBOVISHUD) ನಂಬ್ರಕ್ಕೆ ಜಮಾ ಮಾಡಬಹುದಾಗಿದೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

7 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

7 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

7 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

10 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

11 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

11 hours ago