Featured

ಶಿರ್ವ: ಅನಿವಾಸಿ ಸಾಫ್ಟ್ ವೇರ್ ಉದ್ಯಮಿ ಸೈಮನ್ ಡಿಸೋಜ ಆತ್ಮಹತ್ಯೆ – Vishwanews24

ಶಿರ್ವ: ಅನಿವಾಸಿ ಸಾಫ್ಟ್ ವೇರ್ ಉದ್ಯಮಿ ಸೈಮನ್ ಡಿಸೋಜ ಆತ್ಮಹತ್ಯೆ – Vishwanews24

ಶಿರ್ವ: ಅನಿವಾಸಿ ಸಾಫ್ಟ್ ವೇರ್ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ. 11ರ ಸೋಮವಾರ ಸಂಜೆ ಶಿರ್ವದಲ್ಲಿ ನಡೆದಿದೆ. ಮೃತರನ್ನು ಶಿರ್ವ ನೆಕ್ಕರೆ ನಿವಾಸಿ ಸೈಮನ್ ಡಿಸೋಜ (57)ಎಂದು ಗುರುತಿಸಲಾಗಿದೆ.

ಸೈಮನ್ ಡಿಸೋಜ ಸೋಮವಾರ ಸಂಜೆ ತಮ್ಮ ಮನೆಯ ಆವರಣದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌದಿಯಲ್ಲಿ ಸುಮಾರು 25 ವರ್ಷಗಳ ಕಾಲ ಸಾಫ್ಟ್ ವೇರ್ ಉದ್ಯಮಿಯಾಗಿದ್ದ ಅವರು ವಿದೇಶದಿಂದ ಬಂದ ಬಳಿಕ ಸಮಾಜ ಸೇವೆ ಯಲ್ಲಿ ತೊಡಗಿಸಿಕೊಂಡಿದ್ದರು.

ಪಾಂಬೂರು ಮಾನಸ ಪುನರ್ವಸತಿ ಕೇಂದ್ರದ ಆಡಳಿತ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿದ್ದು, ಕೇಂದ್ರದ ಉನ್ನತಿಗಾಗಿ ಶ್ರಮಿಸಿದ್ದರು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಉಡುಪಿ ಅಗ್ನಿಶಾಮಕ ದಳ ಶವವನ್ನು ಬಾವಿಯಿಂದ ಹೊರಗೆ ತೆಗೆದಿದೆ. ಈ ಕುರಿತು ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಮೃತರು ತಾಯಿ, ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಸುಳ್ಯ : ಗಾನ ಗಂಧರ್ವ ಖ್ಯಾತಿಯ ಯಕ್ಷಗಾನ ಹಿರಿಯ ಭಾಗವತ ಪದ್ಯಾಣ ಗಣಪತಿ ಭಟ್ ನಿಧನ – VIshwanews24

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

56 minutes ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 hour ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 hour ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

5 hours ago