ಉಡುಪಿ: ಕಾರಿಗೆ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾಗಿದ್ದ ಪ್ರಕರಣವನ್ನು ಶಿರ್ವ ಪೊಲೀಸರು ಭೇದಿಸಿ, ಮೂವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಮಹಮ್ಮದ್ ರಿಯಾಜ್ (26), ಕೋಟೆಕಾರ್ ನಿವಾಸಿ, ಮಹಮ್ಮದ್ ಅಫ್ರಾಜ್ (23), ಶಿರ್ವ ನಿವಾಸಿ ಹಾಗೂ ಆಶಿಲ್ (21), ಅಂಬಾಗಿಲು ನಿವಾಸಿ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಫೋರ್ಡ್ ಇಕೋಸ್ಪೋರ್ಟ್ ಕಾರು (KA-14-MB-8452) ವಶಪಡಿಸಿಕೊಳ್ಳಲಾಗಿದೆ.
ಜೂನ್ 27ರಂದು ರಾತ್ರಿ 9.10ರ ಸುಮಾರಿಗೆ ಕಾರ್ಕಳ ತಾಲೂಕಿನ ಕುರ್ಕಾಲು ಗ್ರಾಮದ ಸುಭಾಸ್ ನಗರದಲ್ಲಿರುವ ಫಿಲ್ಲಿಂಗ್ ಸ್ಟೇಷನ್ ಫ್ಯೂಯೆಲ್ ಬಂಕ್‌ಗೆ KA-14-MB-8452 ನೋಂದಣಿ ಸಂಖ್ಯೆಯ ಬಿಳಿ ಬಣ್ಣದ ಫೋರ್ಡ್ ಇಕೋಸ್ಪೋರ್ಟ್ ಕಾರಿನಲ್ಲಿ ಮೂವರು ಬಂದಿದ್ದರು. ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಸಿಬ್ಬಂದಿ ಶಶಾಂಕ್ ಅವರಿಗೆ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸುವಂತೆ ಸೂಚಿಸಿದ್ದು, ₹4,711.09 ಮೌಲ್ಯದ ಡೀಸೆಲ್ ತುಂಬಿಸಲಾಗಿದೆ.
ಬಳಿಕ ಕ್ಯೂಆರ್ ಕೋಡ್ ಮೂಲಕ ಹಣ ಪಾವತಿಸುವುದಾಗಿ ಹೇಳಿ, ಬಿಲ್ ನೀಡುವಂತೆ ಸಿಬ್ಬಂದಿಗೆ ಸೂಚಿಸಿದ್ದರು. ಸಿಬ್ಬಂದಿ ಬಿಲ್ ತೆಗೆಯುವಷ್ಟರಲ್ಲಿ ಹಣ ಪಾವತಿಸದೆ ಕಾರನ್ನು ಚಲಾಯಿಸಿಕೊಂಡು ಪರಾರಿಯಾಗಿದ್ದರು. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 56/2026ರಡಿ ಬಿಎನ್‌ಎಸ್ 2023ರ ಕಲಂ 316(2) ಮತ್ತು 318(4) ಅನ್ವಯ ಪ್ರಕರಣ ದಾಖಲಾಗಿತ್ತು.
ಕಾರ್ಕಳ ಪೊಲೀಸ್ ಉಪಾಧೀಕ್ಷಕ ವಿಜಯ ಪ್ರಸಾದ್ ಹಾಗೂ ಕಾಪು ವೃತ್ತ ಪೊಲೀಸ್ ನಿರೀಕ್ಷಕ ಅಝಮತ್ ಅಲಿ ಅವರ ಮಾರ್ಗದರ್ಶನದಲ್ಲಿ, ಶಿರ್ವ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಮಂಜುನಾಥ ಮರಬದ, ಲೋಹಿತ್ ಕುಮಾರ್ ಸಿ.ಎಸ್. ಹಾಗೂ ಸಿಬ್ಬಂದಿಗಳಾದ ಹರ್ಷ ಭಟ್, ಬಸವರಾಜ, ದರಿಯಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಬಂಧಿಸಿದೆ.
ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದ್ದು, ಇದೇ ರೀತಿಯ ವಂಚನೆ ಕೃತ್ಯಗಳನ್ನು ಬೇರೆಡೆಗಳಲ್ಲಿ ಎಸಗಿರುವ ಕುರಿತು ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]