ಶಿರ್ವ: ಕುತ್ಯಾರು ಗ್ರಾ.ಪಂ. ವ್ಯಾಪ್ತಿಯ ಕುತ್ಯಾರು ಕೇಂಜ ಪರಿಸರದಲ್ಲಿ ಚಿರತೆ ಸಹಿತ ಕಾಡುಪ್ರಾಣಿಗಳ ಹಾವಳಿ ವಿಪರೀತವಾಗಿದ್ದು, ರಸ್ತೆಯಲ್ಲಿ ನಡೆದಾಡುವ ಗ್ರಾಮಸ್ಥರು, ವಿದ್ಯಾರ್ಥಿಗಳು ಭಯಭೀತರಾಗಿದ್ದಾರೆ.
ಪರಿಸರದ ಕಾಡಿನಲ್ಲಿ ಮೂರ್‍ನಾಲ್ಕು ಚಿರತೆಗಳಿದ್ದು ರಾತ್ರಿ ವೇಳೆ ತಿರುಗಾಡುತ್ತಿವೆ. ರಸ್ತೆಯಲ್ಲಿ ಓಡಾಡುವ ವಾಹನ ಸವಾರರು ಭಯಭೀತರಾಗಿದ್ದು,ವಾಹನ ಸವಾರರೋರ್ವರಿಗೆ ರಾತ್ರಿ ರಸ್ತೆಯಲ್ಲಿ ಅಡ್ಡಾಡುವ ಚಿರತೆ ಕಂಡುಬಂದಿದ್ದು, ಮೊಬೈಲ್‌ನಲ್ಲಿ ಕ್ಲಿಕ್ಕಿಸಿದ್ದಾರೆ.ಪರಿಸರದ ನಾಗರಿಕರ ಸಾಕು ಪ್ರಾಣಿಗಳು ಕೂಡಾ ಕಾಣೆಯಾಗುತ್ತಿದ್ದು ನಾಗರಿಕರನ್ನು ಭಯಭೀತರನ್ನಾಗಿಸಿದೆ.
ಅಧಿಕಾರಿಗಳು ಕೂಡಲೇ ಸ್ಪಂದಿಸಿ:
ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡಲೇ ಸ್ಪಂದಿಸಿ ಪರಿಸರಕ್ಕೆ ಭೇಟಿ ನೀಡಿ,ಚಿರತೆ ಹಾವಳಿಗೆ ಬೋನು ಇರಿಸಿ ಹಾಗೂ ಜಿಂಕೆ ಮತ್ತಿತರ ಕಾಡುಪ್ರಾಣಿಗಳ ಹಾವಳಿಗೆ ಸೂಕ್ತ ಕ್ರಮ ಕೈಗೊಂಡು ನಾಗರಿಕರು ನಿರ್ಭೀತಿಯಿಂದ ನಡೆದುಕೊಂಡು ಹೋಗಲು ಅನುವು ಮಾಡಿಕೊಡಬೇಕಾಗಿದೆ. – ಕುತ್ಯಾರು ಕೇಂಜ ಶ್ರೀಧರ ತಂತ್ರಿ ,ಆಗಮ ಪಂಡಿತರು
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…