ಶಿರ್ವ : ಫೆ. 15 ರಂದು ಅನಿರೀಕ್ಷಿತ ಬೆಳವಣಿಗೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಬಿಜೆಪಿ ಬೆಂಬಲಿತ ಗ್ರೆಗೋರಿ ಕೊನ್ರಾಡ್ ಕ್ಯಾಸ್ತಲಿನೋ ಅವರ ನಿಧನದಿಂದ ತೆರವಾಗಿದ್ದ ಶಿರ್ವ ಗ್ರಾ.ಪಂ. ಅಧ್ಯಕ್ಷ ಗಾದಿಗೆ ಚುನಾವಣೆ ನಡೆದು ಅಧ್ಯಕ್ಷ ಗಾದಿ ಕಾಂಗ್ರೆಸ್ ಪಾಲಾಗಿದೆ.
ಕಾಂಗ್ರೆಸ್ ಬೆಂಬಲಿತ ಕೆ.ಆರ್.ಪಾಟ್ಕರ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಗಾದಿಗಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಕೆ. ಆರ್ ಪಾಟ್ಕರ್ ಮತ್ತು ಬಿಜೆಪಿ ಬೆಂಬಲಿತ ಪ್ರವೀಣ್ ಸಾಲ್ಯಾನ್ ನಾಮಪತ್ರ ಸಲ್ಲಿಸಿದ್ದರು. 18-16 ಮತಗಳ ಅಂತರದಿಂದ ಪಾಟ್ಕರ್ ಜಯಶಾಲಿಯಾಗಿದ್ದಾರೆ. ಅಂದು ಕಾಂಗ್ರೆಸ್ ಬೆಂಬಲಿತ 19 ಸದಸ್ಯರಿದ್ದರೂ ಅನಿರೀಕ್ಷಿತ ಬೆಳವಣಿಗೆಯಲ್ಲಿ ಬಿಜೆಪಿ ಬೆಂಬಲಿತರು ಅಧ್ಯಕ್ಷ ರಾಗಿ ಆಯ್ಕೆಯಾಗಿದ್ದರು. ಕಳೆದ ಅವಧಿಯಲ್ಲಿಯೂ ಕಾಂಗ್ರೆಸ್ ಗೆ ಬಹುಮತವಿದ್ದರೂ ಬಿಜೆಪಿ ಬೆಂಬಲಿತರು ಅಧ್ಯಕ್ಷ ರಾಗಿ ಆಯ್ಕೆ ಯಾಗಿದ್ದರು.
ಫೆಬ್ರವರಿಯಲ್ಲಿ ಅಧ್ಯಕ್ಷ ರ ಚುನಾವಣೆ ಗೆ ಮೊದಲು ಬಿಜೆಪಿ ಪ್ರಮುಖರ ಸಮ್ಮುಖದಲ್ಲಿ ದಿ.ಕೊನ್ರಾಡ್ ಕ್ಯಾಸ್ತಲಿನೋ ಮತ್ತು 3 ಸದಸ್ಯರು ಹಾಗೂ ಇತರೆ ಬೆಂಬಗಲಿಗರೊಂದಿಗೆ ಅಧಿಕೃತ ವಾಗಿ ಬಿಜೆಪಿಗೆ ಸೇರ್ಪಡೆ ಗೊಂಡಿದ್ದು ಅಧ್ಯಕ್ಷ ಗಾದಿ ಬಿಜೆಪಿ ಪಾಲಾಗಿತ್ತು. ಮಾ.29 ರಂದು ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಶ್ರೀನಿವಾಸ ಶೆಣೈ ಸದಸ್ಯ ರಾಗಿ ಆಯ್ಕೆ ಯಾಗಿದ್ದರು.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…