ಶಿರ್ವ: ಮಂಗಳೂರಿನಿಂದ ಶಿರ್ವಕ್ಕೆ ಬರುತ್ತಿದ್ದ ಮಾರುತಿ ಡಿಸೈರ್ ಕಾರೊಂದು ರಸ್ತೆ ಮಧ್ಯದಲ್ಲೇ ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಸೋಮವಾರ ಮಧ್ಯರಾತ್ರಿ ಇಲ್ಲಿನ ನ್ಯಾರ್ಮ ಶ್ರೀ ಜಾರಂದಾಯ ದೈವಸ್ಥಾನದ ಬಳಿ ನಡೆದಿದೆ.
ಚಾಲಕನ ಸಮಯಪ್ರಜ್ಞೆಯಿಂದಾಗಿ ಕಾರಿನಲ್ಲಿದ್ದ ಐವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ :
ಘಟನೆಯ ವಿವರ:
ಸೋಮವಾರ ತಡರಾತ್ರಿ ಮಂಗಳೂರಿನಿಂದ ಶಿರ್ವದತ್ತ ಸಾಗುತ್ತಿದ್ದ ಕಾರು ನ್ಯಾರ್ಮ ಪರಿಸರಕ್ಕೆ ತಲುಪುತ್ತಿದ್ದಂತೆ ಇಂಜಿನ್ ಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತ ಚಾಲಕ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ, ಅದರಲ್ಲಿದ್ದ ಮನೆಯ ನಾಲ್ವರು ಸದಸ್ಯರನ್ನು ತಕ್ಷಣವೇ ಕೆಳಗಿಳಿಯುವಂತೆ ಸೂಚಿಸಿದ್ದಾರೆ. ಎಲ್ಲರೂ ಕೆಳಗಿಳಿಯುತ್ತಿದ್ದಂತೆ ಬೆಂಕಿ ಇಡೀ ಕಾರನ್ನು ಆವರಿಸಿದ್ದು, ಕೆಲವೇ ಕ್ಷಣಗಳಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಧಾವಿಸಿ ಬಂದಿದ್ದಾರೆ. ಅಕ್ಕಪಕ್ಕದ ಮನೆಗಳಿಂದ ಪೈಪ್ ಮೂಲಕ ನೀರು ಹಾಯಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರೂ, ಅಷ್ಟರಲ್ಲಾಗಲೇ ಬೆಂಕಿ ಕೆನ್ನಾಲಗೆ ಚಾಚಿದ್ದರಿಂದ ಕಾರು ಸಂಪೂರ್ಣ ಭಸ್ಮವಾಗಿದೆ.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…