ಶಿರ್ವ: ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಪಾಪನಾಶಿನಿ ನದಿಯ ಗುಂಡಿಯಲ್ಲಿ ಇಂದು ಆ.13ರ ಶುಕ್ರವಾರ ಪತ್ತೆಯಾಗಿದೆ.
ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ ಅವರ ಪುತ್ರಿ ವಿನಿತಾ (22) ಮೃತ ಯುವತಿಯಾಗಿದ್ದಾಳೆ.
ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಸೇತುವೆಯ ಸಮೀಪದ ನದಿ ಗುಂಡಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಅ. 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಮನೆಯಿಂದ ಹೋದವರು ಹಿಂತಿರುಗದ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಿ.ಕಾಂ. ಪದವೀಧರೆಯಾಗಿದ್ದ ವಿನಿತಾ ಉಡುಪಿ ಎಂಜಿಎಂ ಕಾಲೇಜ್ ಬಳಿಯ ಎಲೆಕ್ಟ್ರಿಕಲ್ ಬೈಕ್ ಶೋರೂಂನಲ್ಲಿ ಸುಮಾರು 4 ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದು, ವಾರದ ಹಿಂದೆ ಕೆಲಸಬಿಟ್ಟಿದ್ದರು. ನಾಪತ್ತೆಯಾದ ಬಳಿಕ ಆಕೆ ಉಪಯೋಗಿಸುತ್ತಿದ್ದ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಸಂಬಂಧಿಕರ, ಸ್ನೇಹಿತರ ಮನೆ, ಅಸುಪಾಸಿನಲ್ಲಿ ಹುಡುಕಾಡಿದ್ದು ಎಲ್ಲೂ ಪತ್ತೆಯಾಗಿರಲಿಲ್ಲ.
ಸೇತುವೆಯಿಂದ ಹಾರಿ ಆತ್ಮಹತ್ಯೆ ಮಾಡಿರಬೇಕೆಂದು ಶಂಕಿಸಲಾಗಿದ್ದು, ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಲ್ಪೆಯ ಮುಳುಗು ತಜ್ಞ ಈಶ್ವರ್ ಮಲ್ಪೆ ಕೊಳೆತ ಶವವನ್ನು ನದಿಯಿಂದ ಮೇಲಕ್ಕೆತ್ತಿದ್ದು, ಮರಣೋತ್ತರ ಶವ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…