Featured

ಶಿರ್ವ : ನಿರ್ಭಿತ ಚುನಾವಣೆಗಾಗಿ ಪೊಲೀಸ್‌ ಪಥ ಸಂಚಲನ – Vishwanews24

ಶಿರ್ವ: ನಿರ್ಭಿತ ಚುನಾವಣೆಗಾಗಿ ಪೊಲೀಸ್‌ ಪಥ ಸಂಚಲನ

ಶಿರ್ವ: ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವ ಸಲುವಾಗಿ ಪೊಲೀಸ್‌ ಇಲಾಖೆ ಮತ್ತು ಕ್ಷಿಪ್ರಕಾರ್ಯಾಚರಣೆ ಪಡೆ ಸನ್ನದ್ಧರಾಗಿದ್ದು,  ಶಿರ್ವ ಪರಿಸರದ ಜನತೆಯಲ್ಲಿ ಆತ್ಮವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಚುನಾವಣಾ ಪೂರ್ವಭಾವಿಯಾಗಿ ಸೋಮವಾರ ಸಂಜೆ ಪಥಸಂಚಲನ ನಡೆಯಿತು.

ಉಡುಪಿ ಜಿಲ್ಲಾ ಕಾಪು ವೃತ್ತ ವ್ಯಾಪ್ತಿಯ ಶಿರ್ವ ಮಂಚಕಲ್‌ ಪೇಟೆಯಲ್ಲಿ ಸಶಸ್ತ್ರಧಾರಿ ಕ್ಷಿಪ್ರ ಕಾರ್ಯಾಚರಣೆ ಪಡೆಯ ಯೋಧರು ಮತ್ತು ಕಾಪು, ಶಿರ್ವ ಮತ್ತು ಪಡುಬಿದ್ರಿ ಠಾಣೆಯ ಸಿಬಂದಿಯೊಂದಿಗೆ ಶಿರ್ವ ಆರೋಗ್ಯ ಮಾತಾ ದೇವಾಲಯದ ದ್ವಾರದ ಬಳಿಯಿಂದ ಶಿರ್ವ ಪೊಲೀಸ್‌ ಠಾಣೆಯವರೆಗೆ ಪಥ ಸಂಚಲನ ನಡೆಯಿತು.

ಕಾಪು ಕ್ಷೇತ್ರ ಚುನಾವಣಾಧಿಕಾರಿ ಬಿನೋಯ್‌, ಕಾಪು ತಹಶೀಲ್ದಾರ್‌ ಶ್ರೀನಿವಾಸ‌ಮೂರ್ತಿ ಕುಲಕರ್ಣಿ, ಕಾಪು ವೃತ್ತ ನಿರೀಕ್ಷಕ ಕೆ.ಸಿ.ಪೂವಯ್ಯ, ಕ್ಷಿಪ್ರ ಕಾರ್ಯಾಚರಣೆ ಪಡೆಯ ಇನ್ಸ್‌ಪೆಕ್ಟರ್‌ಗಳಾದ ಟಿ.ಕೆ.ಪಾಂಡೆ ಮತ್ತು ಗಿರೀಶ್‌ ಪ್ರಸಾದ್‌, ಪಡುಬಿದ್ರಿ ಠಾಣೆಯ ಪಿಎಸ್‌ಐಗಳಾದ ಪುರುಷೋತ್ತಮ್‌ ಮತ್ತು ಶಿವರುದ್ರಮ್ಮ, ಕಾಪು ಪಿಎಸ್‌ಐ ಭರತೇಶ್‌, ಶಿರ್ವ ಪಿಎಸ್‌ಐ ರಾಘವೇಂದ್ರ .ಸಿ ಹಾಗೂ ಸುಮಾರು 100 ಯೋಧರು ಹಾಗೂ ಕಾಪು, ಪಡುಬಿದ್ರಿ ಮತ್ತು ಶಿರ್ವ ಠಾಣೆಯ 100ಕ್ಕೂ ಹೆಚ್ಚು ಪೊಲೀಸ್‌ ಸಿಬಂದಿ ಪಥಸಂಚಲನದಲ್ಲಿ ಭಾಗವಹಿಸಿದ್ದರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

11 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

19 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

19 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

19 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

19 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

19 hours ago