Featured

ಶಿರ್ವ: ಪಿಲಾರುಕಾನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಸಮೀಪ ಬೃಹತ್‌ ಗಾತ್ರದ ಕಾಡುಕೋಣ ತಿರುಗಾಟ – Vishwanews24

ಶಿರ್ವ: ಪಿಲಾರುಕಾನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಸಮೀಪ ಬೃಹತ್‌ ಗಾತ್ರದ ಕಾಡುಕೋಣ ತಿರುಗಾಟ

ಶಿರ್ವ: ಆತ್ರಾಡಿ -ಶಿರ್ವ-ಬಜ್ಪೆ ರಾಜ್ಯ ಹೆದ್ದಾರಿಯ ಪಿಲಾರುಕಾನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಸಮೀಪ ಬೃಹತ್‌ ಗಾತ್ರದ ಕಾಡುಕೋಣವೊಂದು ಬುಧವಾರ ಬೆಳಗ್ಗೆ 10 -15ರ ವೇಳೆಗೆ ಮುಖ್ಯರಸ್ತೆಯಲ್ಲಿ ರಾಜಾರೋಷವಾಗಿ ತಿರುಗಾಡುತ್ತಿದ್ದು ವಾಹನ ಸವಾರರು ಸ್ವಲ್ಪದಲ್ಲಿಯೇ ಪಾರಾಗಿದ್ದಾರೆ. ಪಿಲಾರುಕಾನ ರಕ್ಷಿತಾರಣ್ಯದ ಪ್ರದೇಶದ ಸುತ್ತ ತಂತಿ ಬೇಲಿ ಹಾಕಲಾಗಿದ್ದು, ಕಾಡುಕೋಣ ಕಾಡಿನೊಳಕ್ಕೆ ಹೋಗಲಾಗ‌ದೆ ಸುತ್ತಾಡಿ ಬಳಿಕ ಕಾಡಿನೊಳಕ್ಕೆ ಹೋಗಿದೆ.

ಕಳೆದ ಎ. 18 ರಂದು ರಾತ್ರಿ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದ ಕಾರಿಗೆ ಅಭಯಾರಣ್ಯದಿಂದ ರಸ್ತೆದಾಟಲು ಯತ್ನಿಸುತ್ತಿದ್ದ ಕಾಡುಕೋಣ ಢಿಕ್ಕಿ ಹೊಡೆದು ಕಾರಿಗೆ ಹಾನಿ ಸಂಭವಿಸಿದ್ದು, ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದರು. ಪಿಲಾರುಕಾನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಸುತ್ತಮುತ್ತ ಭಾರೀ ಗಾತ್ರದ ಕಾಡುಕೋಣಗಳು ಮತ್ತು ಮರಿ ಕೋಣಗಳು ಸುತ್ತಾಡುತ್ತಿದ್ದು, ದೇವಸ್ಥಾನಕ್ಕೆ ಬರುವ ಭಕ್ತರು ಕೂಡ ಭಯಭೀತರಾಗಿದ್ದಾರೆ.

ಕಾಡು ಪ್ರಾಗಳ ಹಾವಳಿ ತಪ್ಪಿಸಲು ಪಿಲಾರುಕಾನ ರಕ್ಷಿತಾರಣ್ಯದ ಪ್ರದೇಶದ ಸುತ್ತ ತಂತಿ ಬೇಲಿ ನಿರ್ಮಿಸಲಾಗಿದೆ. ಈ ಪ್ರದೇಶದ ರಸ್ತೆಯಲ್ಲಿ ಪ್ರಯಾಸುವ ವಾಹನ ಸವಾರರು ಕರ್ಕಶ ಹಾರ್ನ್ ಬಳಸದೆ ಮಿತ ವೇಗದಲ್ಲಿ ಚಲಿಸಬೇಕಾಗಿದೆ. ಕಾಡುಕೋಣಗಳ ಹಾವಳಿಗೆ ಕ್ರಮಕೈಗೊಳ್ಳಲು ಅರಣ್ಯಇಲಾಖೆ ಪ್ರಯತ್ನಿಸುತ್ತಿದ್ದು,ಅರಣ್ಯ ಪ್ರದೇಶದಲ್ಲಿ ಅಡ್ಡಾಡುವ ಜನರು ಜಾಗರೂಕರಾಗಿರಬೇಕೆಂದು ಉಪ ವಲಯ ಅರಣ್ಯಾಧಿಕಾರಿ ಜೀವನ್‌ದಾಸ್‌ ಶೆಟ್ಟಿ, ತಿಳಿಸಿದ್ದಾರೆ.

ರಸ್ತೆಯಲ್ಲಿ ಅಡ್ಡಾಡುತ್ತಿರುವ ಕಾಡುಕೋಣವನ್ನು ವಾಹನದಲ್ಲಿ ಪ್ರಯಾಣಿಸುತ್ತಿರುವ ಗ್ರಾ.ಪಂ. ಸದಸ್ಯ ವಿಜಯ್‌ ಧೀರಜ್‌ ಸೆರೆಹಿಡಿದಿದ್ದು ವೈರಲ್‌ ಆಗಿದೆ.’

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago