ಉಡುಪಿ : ಬೈಕ್‌ಗೆ ರಿಕ್ಷಾ ಢಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕಾಪು ಸಮೀಪ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟಕಲ್ಲು ಪೇಟೆಯಲ್ಲಿ ಗುರುವಾರ ಸಂಭವಿಸಿದೆ.
ಬಂಟಕಲ್ಲಿನ ಬೈದಶ್ರೀ ಫ್ಯಾನ್ಸಿ ಸ್ಟೋರ್‌ನ ಮಾಲಕ ಶಂಕರ ಕೋಟ್ಯಾನ್ (60) ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಮಧ್ಯಾಹ್ನ ಬೈಕ್‌ಗೆ ಪೆಟ್ರೋಲ್ ಹಾಕಲು ಪೆಟ್ರೋಲ್ ಪಂಪ್‌ಗೆ ತೆರಳುತ್ತಿದ್ದ ವೇಳೆ ಬಂಟಕಲ್ಲು ಪೇಟೆಯಲ್ಲಿನ ಬ್ಯಾರಿಕೇಡ್ ಬಳಿ ಶಂಕರಪುರ ಕಡೆಯಿಂದ ವೇಗವಾಗಿ ಬಂದ ರಿಕ್ಷಾ ಢಿಕ್ಕಿ ಹೊಡೆದಿದೆ.
ಮಂಗಳೂರು: ಪರೇಶ್ ಮೇಸ್ತ ಕೇಸ್ ಮರು ತನಿಖೆಗೆ ಮನವಿ : ಸಚಿವ ಕೋಟ – Vishwanews24
ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಬೈಕ್ ಸವಾರ ಶಂಕರ್ ಕೋಟ್ಯಾನರನ್ನು ಸಾರ್ವಜನಿಕರು ಸೇರಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆದರೆ ತಲೆಗೆ ಗಂಭೀರ ಗಾಯಗೊಂಡ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಶಿರ್ವ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…