ಶಿರ್ವ : ಅತ್ಯಾಚಾರಕ್ಕೆ ಒಳಗಾಗಿದ್ದ ಯುವತಿಯನ್ನು ಹೆರಿಗೆ ಮಾಡಿಸಿ, ಬಳಿಕ ಮಗುವನ್ನು ಮಾರಾಟ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಶಿರ್ವ ಪೊಲೀಸರು ವೈದ್ಯ ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಿ.ಸಿ.ರೋಡಿನ ವೈದ್ಯ ಡಾ.ಸೋಮೇಶ್ ಸೊಲೊಮನ್, ಮಂಗಳೂರಿನಲ್ಲಿ ಪೈಯಿಂಗ್ ಗೆಸ್ಟ್ ನಡೆಸುತ್ತಿರುವ ವಿಜಯಲಕ್ಷ್ಮೀ ಯಾನೆ ವಿಜಯ ಮತ್ತು ಅತ್ಯಾಚಾರ ಎಸಗಿದ ಆರೋಪಿ ನವನೀತ್ ನಾರಾಯಣ(25) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಹಿನ್ನೆಲೆ: ಹಲವು ವರ್ಷಗಳಿಂದ ಮಕ್ಕಳಾಗದ ಕಾರಣಕ್ಕೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ 92ನೇ ಹೇರೂರು ಗ್ರಾಮದ ಕಲ್ಲುಗುಡ್ಡೆ ನಿವಾಸಿ ಪ್ರಭಾವತಿ ಹಾಗೂ ರಮೇಶ್ ಮೂಲ್ಯ ದಂಪತಿ, ಮಗು ದತ್ತು ಪಡೆಯುವ ಬಗ್ಗೆ ಅವರ ಚಿಕ್ಕಮ್ಮನ ಮಗಳು ಪ್ರಿಯಾಂಕ ಅವರಲ್ಲಿ ತಿಳಿಸಿದ್ದರು.
ಪ್ರಿಯಾಂಕ ಈ ವಿಚಾರದಲ್ಲಿ ದಂಪತಿಗೆ ವಿಜಯಲಕ್ಷ್ಮೀ ಅವರನ್ನು ಪರಿಚಯ ಮಾಡಿಸಿದ್ದರು. ವಿಜಯಲಕ್ಷ್ಮೀಯ ಪೆಯಿಂಗ್ ಗೆಸ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರ ಅವಿವಾಹಿತ ಮಗಳು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದು, ಆ ಮಗುವನ್ನೇ ನೀಡುವುದಾಗಿ ವಿಜಯಲಕ್ಷ್ಮೀ ದಂಪತಿಗೆ ತಿಳಿಸಿದ್ದರು. ಹೀಗೆ ಗರ್ಭದಲ್ಲಿರುವ ಈ ಮಗುವನ್ನು ಹೆರಿಗೆಯ ಬಳಿಕ ಈ ದಂಪತಿಗೆ ಮಾರಾಟ ಮಾಡಲು ವಿಜಯಲಕ್ಷ್ಮೀ ಹಾಗೂ ಡಾ.ಸೋಮೇಶ್ ಯೋಜನೆ ಹಾಕಿಕೊಂಡರೆನ್ನಲಾಗಿದೆ.
ಗರ್ಭಿಣಿ ಯುವತಿ ಸ್ಕ್ಯಾನಿಂಗ್‌ಗೆ ಹೋದಾಗಲೆಲ್ಲ ಇವರು ಆಕೆಯ ಆಧಾರ್ ಕಾರ್ಡ್ ಬದಲು ಶಿರ್ವದ ಪ್ರಭಾವತಿ ಅವರ ಆಧಾರ್ ಕಾರ್ಡ್ ನೀಡುತ್ತಿದ್ದರು. ಹೀಗೆ ಗರ್ಭದಲ್ಲಿರುವಾಗಲೇ ಈ ಮಗು ಪ್ರಭಾವತಿ ಅವರದ್ದಾಗಿ ಮಾಡುವ ಪ್ಲಾನ್ ಇವರದ್ದಾಗಿತ್ತು. ಯುವತಿ ಆ.3ರಂದು ಮಂಗಳೂರಿನ ಕೊಲಸೋ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದರು. ಆ ಮಗುವನ್ನು ವಿಜಯಲಕ್ಷ್ಮೀ ಹಾಗೂ ಡಾ.ಸೋಮೇಶ್, ಪ್ರಭಾವತಿ ದಂಪತಿಗೆ 4.5ಲಕ್ಷ ರೂ. ಹಣಕ್ಕೆ ಮಾರಾಟ ಮಾಡಿದರು ಎಂದು ಎಸ್ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…