ಶಿರ್ವ : ಮಹಿಳೆಯೊಬ್ಬರ ಸಂಶಯಾಸ್ಪದ ಸಾವಿನ ಕುರಿತು ಪ್ರಕರಣ ದಾಖಲಾಗಿದೆ. ಮೃತಪಟ್ಟ ಮಹಿಳೆ ಮಗಳು ದೂರು ದಾಖಲಿಸಿದ್ದು, ತಾಯಿ ಸುಮತಿ (66) ಅವರು ಸಂಶಯಾಸ್ಪದವಾಗಿ ಮೃತಪಟ್ಟಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ
ಮೃತರಿಗೆ 5 ಜನ ಮಕ್ಕಳಿದ್ದು ಅವರ ಗಂಡ 03 ವರ್ಷದ ಹಿಂದೆ ಮರಣ ಹೊಂದಿದ ಬಳಿಕ ಒಬ್ಬರೇ ವಾಸಿಸುತ್ತಿದ್ದರು. ಮಕ್ಕಳು ಆಗಾಗ್ಗೆ ಬಂದು ಹೋಗುತಿದ್ದರು.
ಆ 26 ರಂದು ಮಗಳು ವಿಜಯ್ ಅವರು ಸುಮತಿ ರವರನ್ನು ಮನೆಗೆ ಬಂದು ಮಾತನಾಡಿಸಿಕೊಂಡು ಹೋಗಿದ್ದು ಪ್ರತಿ ನಿತ್ಯದಂತೆ ಆಗಸ್ಟ್ 27 ರಂದು ರಾತ್ರಿ 10:30 ಗಂಟೆಗೆ ತಾಯಿಗೆ ಕರೆ ಮಾಡಿದಾಗ ಕರೆಯನ್ನು ಸ್ವೀಕರಿಸದೇ ಇದ್ದಾಗ ತನ್ನ ಇಬ್ಬರು ಮಕ್ಕಳಾದ ರೋಶನ್ ಮತ್ತು ಮೋಹಿತ್ ರನ್ನು ತಾಯಿ ಮನೆಗೆ ಕಳುಹಿಸಿಕೊಟ್ಟಿದ್ದು ಅವರಿಬ್ಬರು ಅಲ್ಲಿಗೆ ಹೋಗಿ ನೋಡಿ ಸುಮತಿ ರವರು ಮಲಗಿದ್ದಾಗಿ, ಕರೆದರೂ ಏಳುತ್ತಿಲ್ಲ ಎಂದು ತಿಳಿಸಿದ್ದಾರೆ. ಕೂಡಲೇ ತನ್ನ ಗಂಡನೊಂದಿಗೆ ಅಲ್ಲಿಗೆ ಹೋಗಿ ನೋಡಲಾಗಿ ತಾಯಿ ಮಾಡನಾಡದೇ ಇದ್ದು 108 ನೇ ವಾಹನಕ್ಕೆ ಕರೆ ಮಾಡಿ ಆ ವಾಹನದಲ್ಲಿ ನೆರೆ-ಕರೆಯವರ ಸಹಾಯದೊಂದಿಗೆ ಕಾಪುವಿನ ಪ್ರಶಾಂತ ಆಸ್ಪತ್ರಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿನ ವೈದ್ಯರು ವಿಚಾರಿಸಿ ಕೆಎಮ್ ಸಿ ಆಸ್ಪತ್ರಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದು ಅದರಂತೆ ಮಣಿಪಾಲದ ಕೆಎಮ್ ಸಿ ಆಸ್ಪತ್ರಗೆ ದಿನಾಂಕ 28/08/2024 ರಂದು 12:30 ಗಂಟೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ಅಲ್ಲಿನ ವೈದ್ಯಾದಿಕಾರಿಯವರು ಮೃತ ಪಟ್ಟಿದ್ದಾಗಿ ತಿಳಿಸಿದ್ದಾರೆ.
ತಾಯಿ ಯವರ ಮುಖವು ಊದಿಕೊಂಡಿದ್ದು ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಚೈನ್, ಒಂದು ಜೊತೆ ಬಳೆ , ಉಂಗುರ ಸ್ವತುಗಳು ಇರಲಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮನೆಯ ಬೇರೆ ಎಲ್ಲಾ ಸ್ವತ್ತುಗಳು ಯಥಾ ಸ್ಥಿತಿಯಲ್ಲಿರುತ್ತವೆ. ಸುಮತಿ ರವರ ಮರಣದಲ್ಲಿ ಸಂಶಯವಿರುವುದಾಗಿ ನೀಡಿದ ದೂರಿನಂತೆ ಶಿರ್ವಾ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿರುತ್ತದೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…