ಶಿರ್ವ: ಲೋಕೋಪಯೋಗಿ ಇಲಾಖೆಯ ಕಟಪಾಡಿ-ಶಿರ್ವ ಮುಖ್ಯ ರಸ್ತೆಯ ಪಂಜಿಮಾರು ಬಸ್ ನಿಲ್ದಾಣದಿಂದ ಮುಂದಕ್ಕೆ ಇರುವ ಕೋಡು-ಪಂಜಿಮಾರು ತಿರುವಿನಲ್ಲಿ ರಸ್ತೆ ಎತ್ತರಿಸಿ ಮೋರಿ ಕಾಮಗಾರಿ ನಡೆಯುತ್ತಿದ್ದು ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ರಸ್ತೆ ಕೆಸರುಮಯವಾಗಿ ಜಾರುತ್ತಿದ್ದು, ವಾಹನ ಸವಾರರಿಗೆ ಕಂಟಕಪ್ರಾಯವಾಗಿ ಪರಿಣಮಿಸಿದೆ.
ಕೋಡು-ಪಂಜಿಮಾರು ತಿರುವಿನ ಇಳಿಜಾರಿನ ರಸ್ತೆಯಲ್ಲಿ ಮೋರಿ ನಿರ್ಮಿಸಿ ರಸ್ತೆ ಎತ್ತರಿಸಲು ಮೋರಿಯ ಇಕ್ಕೆಲದಲ್ಲಿ ಮಣ್ಣು ತುಂಬಿಸಲಾಗಿತ್ತು. ರಾತ್ರಿ ಸುರಿದ ಭಾರೀ ಮಳೆಗೆ ರಸ್ತೆ ಕೆಸರುಮಯವಾಗಿ ಆವಾಂತರ ಸೃಷ್ಠಿಯಾಗಿದೆ. ಬೆಳ್ಳಂಬೆಳಗ್ಗೆ ರಸ್ತೆಯ ಕೆಸರಿನಲ್ಲಿ ಹಲವು ದ್ವಿಚಕ್ರ ವಾಹನ ಸವಾರರು ಜಾರಿ ಬಿದ್ದು ಗಾಯಗೊಂಡಿದ್ದಾರೆ. ರಸ್ತೆ ಕೆಸರುಮಯವಾಗಿ ಜಾರುತ್ತಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಚಲಿಸುವಂತಾಗಿದೆ. ರಸ್ತೆಯ ಒಂದು ಮಗ್ಗುಲಿನ ಮಣ್ಣು ಕುಸಿದಿದ್ದು, ಬಬ್ಬರ್ಯ ದೈವಸ್ಥಾನದ ಕಡೆಗೆ ಹೋಗುವ ನಾಗರಿಕರಿಗೆ ದಾರಿಯೇ ಇಲ್ಲದಂತಾಗಿದೆ.
ರಸ್ತೆ ವಿಸ್ತರಣೆ ಕಾಮಗಾರಿ ನಡೆದು ತಿರುವು ರಸ್ತೆ ನೇರವಾಗಿ ಸುವ್ಯವಸ್ಥಿತ ರಸ್ತೆಯಾಗುವ ಮೊದಲೇ ಮಳೆ ಅವಾಂತರ ಸೃಷ್ಠಿ ಮಾಡಿದೆ. ಸಂಬಂಧಪಟ್ಟ ಇಲಾಖೆ ಮತ್ತು ಗುತ್ತಿಗೆದಾರರು ವಾಹನ ನಿಬಿಡತೆಯಿಂದ ಕೂಡಿರುವ ಈ ರಸ್ತೆಯನ್ನು ಸುಗಮ ಸಂಚಾರಕ್ಕಾಗಿ ಅನುವು ಮಾಡಿಕೊಡಬೇಕೆಂಬುದು ನಾಗರಿಕರ ಒತ್ತಾಯಿಸುತ್ತಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…