Featured

ಶಿರ್ವ: ಯುವತಿ ನಾಪತ್ತೆ – Vishwanews24

ಶಿರ್ವ: ಯುವತಿ ನಾಪತ್ತೆ

ಶಿರ್ವ: ಮುಂಬಯಿಯಲ್ಲಿ ವಿದ್ಯಾಭ್ಯಾಸ ಮುಗಿಸಿ ಕಳೆದ ಒಂದು ವರ್ಷದಿಂದ ತನ್ನ ಚಿಕ್ಕಮ್ಮನ ಮನೆ ಶಿರ್ವ ಮುಖ್ಯರಸ್ತೆ ಬಳಿಯ ಕುಡ್ತಮಜಲು ಎಂಬಲ್ಲಿ ವಾಸವಾಗಿದ್ದ ಶ್ರದ್ಧಾ (21) ಜೂ. 13 ರಂದು ಬೆಳಗ್ಗೆ 9 ಗಂಟೆಯಿಂದ ಮನೆಯಿಂದ ಹೋದವರು ವಾಪಾಸು ಬಾರದೆ ಕಾಣೆಯಾಗಿದ್ದಾರೆ.

ಈಕೆಯ ಚಿಕ್ಕಮ್ಮ ಕುಡ್ತಮಜಲು ನಿವಾಸಿ ಗೌರಿ ಜೂ. 13 ರಂದು ಬೆಳಗ್ಗೆ 9 ಗಂಟೆಗೆ ಕೆಲಸದ ನಿಮಿತ್ತ ಶಾಲೆಗೆ ಹೋಗಿದ್ದು, ಮಧ್ಯಾಹ್ನ 2 ಗಂಟೆಗೆ ಮನೆಗೆ ಬಂದಾಗ ಆಕೆ ಕಾಣೆಯಾಗಿದ್ದಳು.

ಮನೆಯಲ್ಲಿ ಆಕೆ ಹಿಂದಿಯಲ್ಲಿ ಬರೆದ ಪತ್ರ ದೊರೆತಿದ್ದು, ಅದರಲ್ಲಿ ತಾನು ಇಲ್ಲಿಗೆ ಬಂದು 1 ವರ್ಷವಾಗಿದ್ದು,ಇಷ್ಟು ಸಮಯ ನನ್ನನ್ನು ನೋಡಿದ್ದಕ್ಕೆ ಕೃತಜ್ಞತೆಗಳು. ಪೂನಾಕ್ಕೆ ಟೀಚರ್‌ ಕೆಲಸಕ್ಕೆ ಹೋಗುತ್ತಿದ್ದೇನೆ. ನಾನು ಕಾಣೆಯಾದ ಬಗ್ಗೆ ಪೊಲೀಸ್‌ ಕೇಸ್‌ ಮಾಡುವುದು ಬೇಡ, ನನ್ನ ಬಗ್ಗೆ ಚಿಂತೆ ಮಾಡಬೇಡಿ, ನಾನು ಯಾರಿಗೂ ಭಾರವಾಗಿರುವುದು ನನಗೆ ಇಷ್ಟವಿಲ್ಲ ಎಂದು ಬರೆದಿದ್ದಾಳೆ.

ಸಂಬಂಧಿಕರ ಸಹಿತ ಎಲ್ಲಾ ಕಡೆ ಹುಡುಕಾಡಿದ್ದು, ಈವರೆಗೆ ಪತ್ತೆಯಾಗಿರುವುದಿಲ್ಲ ಎಂದು ಆಕೆಯ ಚಿಕ್ಕಮ್ಮ ಗೌರಿ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

43 minutes ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

49 minutes ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago