ಕಟಪಾಡಿ : ಕಟಪಾಡಿ ಶಿರ್ವ ರಸ್ತೆಯ ಕಟಪಾಡಿ ವಾರದ ಸಂತೆ ಮಾರುಕಟ್ಟೆ ಬಳಿ ಖಾಸಗಿಯವರಿಗೆ ಸೇರಿದ ಮಾವಿನ ಮರವೊಂದು ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದು ರಸ್ತೆಸಂಚಾರಕ್ಕೆ ಅಡಚಣೆಯುಂಟಾದ ಘಟನೆ ಶನಿವಾರ ರಾತ್ರಿ ನಡೆದಿದೆ.
ಘಟನೆಯಲ್ಲಿ ಒಬ್ಬ ದ್ವಿಚಕ್ರ ವಾಹನ ಸವಾರ ಚಿಟ್ಪಾಡಿ ಡಯನಾ ಟಾಕೀಸ್ ಬಳಿಯ ಸೆಲ್ವ ಕುಮಾರ್(೩೯)ಅವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ದ್ವಿಚಕ್ರವಾಹನಗಳಿಗೆ ಹಾನಿಯಾಗಿದೆ.
ಶನಿವಾರ ವಾರದ ಸಂತೆ ನಡೆಯುತ್ತಿದ್ದು, ಮಳೆ ಬರುತ್ತಿದ್ದ ಕಾರಣ ರಸ್ತೆಯಲ್ಲಿ ಹೆಚ್ಚಿನ ಜನಸಂಚಾರ ಇಲ್ಲದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ.
ರಸ್ತೆಗೆ ಅಡ್ಡಲಾಗಿ ಮರ ಉರುಳಿರುವುದರಿಂದ ಬೆಳ್ಮಣ್ ಶಿರ್ವ ಕಟಪಾಡಿ ಭಾಗದ ವಾಹನ ಸವಾರರಿಗೆ ತೊಂದರೆಯಾಗಿದ್ದ, ರೂಟ್ ಬಸ್ಸುಗಳು ಮೂಡಬೆಟ್ಟು ಶಂಕರಪುರ ರಸ್ತೆಯ ಮೂಲಕ ಸಂಚರಿಸುವಂತಾಯಿತು.
ಸ್ಥಳೀಯ ಪೋಲಿಸರು ಅರಣ್ಯ ಸಿಬಂದಿ ಹಾಗೂ ಸಾರ್ವಜನಿಕರು ರಸ್ತೆಯಿಂದ ಮರ ತೆರವುಗೊಳಿಸಲು ಸಹಕರಿಸಿದರು.
ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಕಟಪಾಡಿ ಹೊರಠಾಣಾ ಸಿಬಂದಿ ರುಕ್ಮಯ್ಯ ಹಾಗೂ ಮೋಹನ್ ತೆರವು ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…