ಶಿರ್ವ : ಇಲ್ಲಿನ ಮುದರಂಗಡಿ ಪೇಟೆಯ ಸಮೀಪ ಇಂದು (ಡಿಸೆಂಬರ್ 26) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟಿದ್ದಾರೆ. ಮುದರಂಗಡಿ ಅಗರ್ ದಂಡೆ ನಿವಾಸಿ ಜಾಸ್ವಿನ್ ಡಿಸೋಜ (23) ಮೃತಪಟ್ಟ ದುರ್ದೈವಿ.
ಘಟನೆಯ ವಿವರ:
ಡಿಸೆಂಬರ್ 26ರಂದು ಮುಂಜಾನೆ ಸುಮಾರು 3:40ರ ವೇಳೆಗೆ ಈ ಅಪಘಾತ ಸಂಭವಿಸಿದೆ. ಜಾಸ್ವಿನ್ ಅವರು ತಡರಾತ್ರಿವರೆಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ವಾಪಸ್ ಮನೆಗೆ ಮರಳುತ್ತಿದ್ದಾಗ, ಮುದರಂಗಡಿ ಪೇಟೆ ಸಮೀಪದ ರಸ್ತೆ ಪಕ್ಕದಲ್ಲಿದ್ದ ಡಿವೈಡರ್‌ಗೆ ಸ್ಕೂಟರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಡಿಕ್ಕಿಯ ರಭಸಕ್ಕೆ ಜಾಸ್ವಿನ್ ಅವರು ತೀವ್ರವಾಗಿ ಗಾಯಗೊಂಡಿದ್ದು, ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಅವರನ್ನು ಮಣಿಪಾಲಿನ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಯಿತು. ಆದರೆ ದಾರಿ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿರುತ್ತದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…