Featured

ಶಿರ್ವ: ರಸ್ತೆ ದಾಟಲು ನಿಂತಿದ್ದ ತಂದೆ ಮಗನಿಗೆ ಬೈಕ್‌ ಢಿಕ್ಕಿ ; ತಂದೆ ಸಾವು , ಮಗ ಗಂಭೀರ – Vishwanews24

ಶಿರ್ವ: ರಸ್ತೆ ದಾಟಲು ನಿಂತಿದ್ದ ತಂದೆ ಮಗನಿಗೆ ಬೈಕ್‌ ಢಿಕ್ಕಿ ; ತಂದೆ ಸಾವು , ಮಗ ಗಂಭೀರ

ಶಿರ್ವ  : ರಸ್ತೆ ದಾಟಲು ನಿಂತಿದ್ದ ತಂದೆ ಮಗನಿಗೆ ಬೈಕ್‌ ಢಿಕ್ಕಿ ಹೊಡೆದು ತಂದೆ ಮೃತಪಟ್ಟು ಮಗ ಗಂಭೀರ ಗಾಯಗೊಂಡ ಘಟನೆ ಶಿರ್ವದ ಬಂಟಕಲ್ಲು ಪೇಟೆಯ ಆಶಾ ಕಾಂಪ್ಲೆಕ್ಸ್‌ ಬಳಿ ನಿನ್ನೆ ರಾತ್ರಿ ನಡೆದಿದೆ.

ಬಾಗಲಕೋಟೆ ಮೂಲದ ಶರಣಪ್ಪ ಬಾಲಪ್ಪ ಗಂಜಿಹಾಳ(40) ಮೃತಪಟ್ಟವರು. ಶ್ರವಣ ಕುಮಾರ(6) ಅಪಘಾತದಲ್ಲಿ ಗಾಯಗೊಂಡವರು.

ಇದನ್ನೂ ಓದಿ: ದುಡುಕದೆ ನಿರ್ಣಯವನ್ನು ತೆಗೆದುಕೊಳ್ಳಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಶರಣಪ್ಪ ತನ್ನ ಪುತ್ರ ಶ್ರವಣಕುಮಾರನೊಂದಿಗೆ ಬುಧವಾರ ರಾತ್ರಿ 7 ಗಂಟೆ ಸುಮಾರಿಗೆ ದಿನಸಿ ತರಲು ಬಂಟಕಲ್ಲು ಪೇಟೆಯ ಆಶಾ ಕಾಂಪ್ಲೆಕ್ಸ್‌ನ ಎದುರುಗಡೆ ರಸ್ತೆ ಬದಿಯಲ್ಲಿ ನಿಂತಿದ್ದರು. ಈ ವೇಳೆ ಶಂಕರಪುರ ಕಡೆಯಿಂದ ವೇಗವಾಗಿ ಬಂದ ಬೈಕ್‌ ಸವಾರ ಇವರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಇಬ್ಬರನ್ನೂ ಸಾರ್ವಜನಿಕರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ತಲೆಗೆ ಗಂಭೀರ ಗಾಯಗೊಂಡ ಶರಣಪ್ಪ ಅವರು ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ. ಶ್ರವಣ ಕುಮಾರ ಅವರು ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದೆ.

ಡಿಕ್ಕಿ ಹೊಡೆದ ಬೈಕ್ ಸವಾರ ಬೈಕ್ ನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕುಂದಾಪುರ: ಬೈಕ್‌ಗಳ ನಡುವೆ ಅಪಘಾತ – ಪತಿ ಸಾವು , ಪತ್ನಿ ಗಂಭೀರ – Vishwanews24

Vishwa News 24

Recent Posts

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ – vishwanews24

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…

15 hours ago

ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ – vishwanews24

ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…

15 hours ago

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ : ಇನ್ಸ್‌ಪೆಕ್ಟರ್‌ ಯಾವುದೇ ತಪ್ಪು ಮಾಡಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ಇನ್ಸ್‌ಪೆಕ್ಟರ್‌ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ  ತಪ್ಪೇ ಮಾಡದ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…

15 hours ago

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ – vishwanews24

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…

16 hours ago

‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ – vishwanews24

'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…

17 hours ago

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ – vishwanews24

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ  : ಚಾಲಕನ ನಿಯಂತ್ರಣ…

18 hours ago