Featured

ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ನೂತನ ಹವಾನಿಯಂತ್ರಿತ ಪ್ರಧಾನ ಕಚೇರಿ ಉದ್ಘಾಟನೆ : vishwanews24

ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ನೂತನ ಹವಾನಿಯಂತ್ರಿತ ಪ್ರಧಾನ ಕಚೇರಿ ಉದ್ಘಾಟನೆ : vishwanews24

ಹತ್ತು ಲಕ್ಷ ರೂಪಾಯಿ ಸಹಾಯಧನ‌ ಘೋಷಣೆ ಮಾಡಿದ ಡಾ.ಎಂ.ಎನ್.ಆರ್

ಉಡುಪಿ\ಶಿರ್ವ: ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ನೂತನ ಹವಾನಿಯಂತ್ರಿತ ಪ್ರಧಾನ ಕಛೇರಿ ಹಾಗೂ ಗೋಧಾಮು ಕಟ್ಟಡ, ಪಡಿತರ ಮತ್ತು ರಸಗೊಬ್ಬರ ವಿತರಣೆ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಶನಿವಾರ ನೆರವೇರಿತು.

ರಾಜ್ಯ ಸಹಕಾರ ಮಾರಾಟ ಮಹಾಮಂಡಲ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ ಎನ್ ರಾಜೇಂದ್ರ ಕುಮಾರ್ ಪ್ರಧಾನ ಕಛೇರಿ ಉದ್ಘಾಟಿಸಿದರು.

ಈ ಸಂದರ್ಭ ಅವರು ಮಾತನಾಡಿ ” ಶಿಸ್ತಿನ ಕಾರ್ಯಕ್ರಮ-ನಮ್ಮ ಕಾರ್ಯಕ್ರಮ ನನಗೆ ಆಗುತ್ತಿರುವ ಎಲ್ಲಾ ಸನ್ಮಾನ‌ಕಾರ್ಯಕ್ರಮ-ಇವೆಲ್ಲವೂ ಕೂಡ ವ್ಯಕ್ತಿಗೆ ಆಗವ ಗೌರವ ಅಲ್ಲ ಅದು ನವೋದಯ ಸ್ವಸಹಾಯ ಸಂಘದ ಸದಸ್ಯರಿಗೆ ಸಲ್ಲಬೇಕು ಇವತ್ತು ಮಹಿಳೆಯರು ಸ್ವಾವಲಂಬನೆಯ ಜೀವನ ನಡೆಸಲು ನವೋದಯ ಸ್ವಸಹಾಯ ಸಂಘ ಕಾರಣವಾಗಿದೆ.

ಸಹಕಾರಿ ಕ್ಷೇತ್ರ ಅತ್ಯಂತ ಪವಿತ್ರ ಕ್ಷೇತ್ರ ಎಂಬ ಮಾತನ್ನು ದಿಟವಾಗಿಸಿದ ಜಿಲ್ಲೆ ಅವಿಭಜಿತ ದಕ- ಹಾಗೂ ಉಡುಪಿ ಜಿಲ್ಲೆ ಎಂದು ಹೇಳಲು ಹೆಮ್ಮೆಯಾಗುತ್ತದೆ.ಇವತ್ತು ರಾಷ್ಟ್ರ ಮಟ್ಟದಲ್ಲಿ ನಮ್ಮ ಜಿಲ್ಲೆಯ ಸಹಕಾರಿ ವ್ಯವಸ್ಥೆ ಪ್ರಥಮ ಸ್ಥಾನಗಿಟ್ಟಿಸಿಕೊಂಡಿದೆ ಅದಕ್ಕೆ ಮೂಲ ಕಾರಣ ನಮ್ಮ ಜಿಲ್ಲೆಯ ಸಹಕಾರಿಗಳು ಎಂದರು.ಇದೇ ಸಂಧರ್ಭದಲ್ಲಿ ಈ ಸಹಕಾರಿ ಸಂಘಕ್ಕೆ ಹತ್ತು ಲಕ್ಷ ರೂಪಾಯಿಯ ಸಹಾಯ ಧನ ನೀಡಲಾಗುವುದು ಮತ್ತು ಗಾಣದ ವ್ಯವಸ್ಥೆಗೆ ಸಹಕಾರ ಮಾಡುವುದಾಗಿದೆ ಘೋಷಿಸಿದರು.

ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭದ್ರತಾ ಕೊಠಡಿ ಉದ್ಘಾಟಿಸಿ ಮಾತನಾಡಿ” ಸಹಕಾರಿ ರಂಗದಲ್ಲಿ ಯಾವುದೇ ಜಾತಿ ಧರ್ಮ ಮತ ಅಡ್ಡಿಯಾಗುವುದಿಲ್ಲ ಅಂತಹ ಸಂಘಟನೆ ಕೂಡಲಸಂಗಮವಾಗುವುದು,ಜನಸಾಮಾನ್ಯರ ಕಟ್ಟಕಡೆಯ ವ್ಯಕ್ತಿಗೆ ಸಹಕಾರಿ ವ್ಯವಸ್ಥೆ ಮುಟ್ಟಿಸುವ ಕೆಲಸ ಈ ಸಂಸ್ಥೆಯಿಂದ ಮುಂದುವರಿಯಲಿ ಎಂದು ಆಶೀಸಿದರು.

ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಕುತ್ತ್ಯಾರು ಪ್ರಸದ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಅತಿಥಿಗಳನ್ನು ಸ್ವಾಗತಿಸಿ ಪ್ರಸ್ತಾವಿಕ ಮಾತುಗಳನ್ನಾಡಿದರು.

ಶಾಸಕ ಯಶಪಾಲ್ ಸುವರ್ಣ ಕಾನ್ಫರೆನ್ಸ್ ಕಾಲ್ ಹಾಗೂ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ಗ್ರಾಹಕರ ಭದ್ರತಾ ಕೋಶ, ಉಡುಪಿ ಜಿಲ್ಲೆ ಸಹಕಾರ ಭಾರತಿ ಅಧ್ಯಕ್ಷ ಬೋಳ ಸದಾಶಿವ ಶೆಟ್ಟಿ ರಸಗೊಬ್ಬರ ಗೋಧಾಮು ಮತ್ತು ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ರಾಜೇಶ್ ಎಂ ಎಸ್ ಸಿ ಗೋದಾಮು ಉದ್ಘಾಟಿಸಿದರು.

ದ.ಕ.ಜಿ.ಕೇಂದ್ರ ಸ.ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ, ರಾಜೇಶ್ ರಾವ್ ಪಾಂಗಾಳ, ನಾಬಾರ್ಡ್ ನ ಡಿಡಿಎಂ ಸಂಗೀತ ಎಸ್ ಕರ್ತ, ಮಂಗಳೂರು ಮತ್ತು ಉಡುಪಿ ಸಹಕಾರ ಸಂಘಗಳ ಉಪ ನಿಬಂಧಕ ಎಚ್. ಎನ್. ರಮೇಶ್ ಹಾಗೂ ಕುಂದಾಪುರ ಸಹಕಾರ ಸಂಘಗಳ ಸಹಾಯಕ ನಿಬಂಧಕ ಅರುಣ್ ಕುಮಾರ್ ಎಸ್ ವಿ , ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ರಾಜೇಶ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಂಘದ ಉಪಾಧ್ಯಕ್ಷೆ ವಾರಿಜಾ ಆರ್ ಕಲ್ಮಾಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಆಚಾರ್ಯ ಮತ್ತು ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.

ಬೆಳಿಗ್ಗೆ ಕಚೇರಿ ಕಟ್ಟಡ ಉದ್ಘಾಟನೆ ನಡೆದು 10 ಗಂಟೆಗೆ ಪ್ರಧಾನ ಕಚೇರಿಯಿಂದ ಶಿರ್ವ ಶ್ರೀ ಮಹಾಲಸಾ ನಾರಾಯಣಿ ದೇವಸ್ಥಾನದವರೆಗೆ ಶೋಭ ಯಾತ್ರೆ ನಡೆಯಿತು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago