ಶಿರ್ವ : ಉಡುಪಿ ಜಿಲ್ಲೆಯ ಶಿರ್ವದಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.
ಇಲ್ಲಿನ ಮೂಡುಬೆಳ್ಳೆ ಸಂತ ಲಾರೆನ್ಸ್ ಕನ್ನಡ ಮಾಧ್ಯಮ ಪ್ರೌಢ ಶಾಲಾ 10ನೇ ತರಗತಿ ವಿದ್ಯಾರ್ಥಿನಿ ಭಾಗ್ಯಶ್ರೀ (16) ಇಂದು (ಬುಧವಾರ) ಹೃದಯಾಘಾತದಿಂದ ನಿಧನಳಾಗಿದ್ದಾಳೆ.
ಎಂದಿನಂತೆ ಶಾಲೆಗೆ ಹೋಗುತ್ತಿದ್ದ ಭಾಗ್ಯಶ್ರೀಗೆ ಇಂದು ಬೆಳಿಗ್ಗೆ ಎದೆ ನೋವು ಕಾಣಿಸಿದ್ದು ಕೂಡಲೇ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾಗ್ಯಶ್ರೀ ನಿಧನ ಹೊಂದಿದ್ದಾಳೆ. ಇವಳಿಗೆ ಹೃದಯ ಸಂಬಂಧಿ ಕಾಯಿಲೆ ಇತ್ತು. ಇವಳು ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ ಚಂದ್ರಿಕಾ ದಂಪತಿಗಳ ಪುತ್ರಿ. ಇವಳ ನಿಧನಕ್ಕೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಶಿಕ್ಷಕರು,ವಿದ್ಯಾರ್ಥಿ ವೃಂದದವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತ ಭಾಗ್ಯಶ್ರೀ ಗೌರವಾರ್ಥ ಶಾಲೆಗೆ ರಜೆ ನೀಡಲಾಗಿತ್ತು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…